ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷಾ ಎಂಬ ಯುವಕನ ಕೊಲೆ ಬಳಿಕ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಘಟನೆ ನಡೆದ ಸೀಗೆಹಟ್ಟಿಯಲ್ಲಿ ಕಳೆದ ರಾತ್ರಿ ಮನೆ ಮುಂದೆ ನಿಂತಿದ್ದ ಮೂರು ಬೈಕ್ ಹಾಗೂ ಒಂದು ಟಾಟಾ ಏಸ್ಗೆ ಬೆಂಕಿ ಹಚ್ಚಲಾಗಿದೆ. ಇದರಲ್ಲಿ ಬೈಕ್ಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.
ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ನೀಡಿ ಬೆಂಕಿ ನಂದಿಸಿದರು. ಸೀಗೆಹಟ್ಟಿಯಲ್ಲಿ ಕಲ್ಲು ತೂರಾಟ ನಡೆದಿದ್ದು, ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು.
ಕೊಲೆ ಪ್ರಕರಣದ ಬೆನ್ನಲ್ಲೇ ನಗರಕ್ಕೆ ಐಜಿಪಿ ತ್ಯಾಗರಾಜನ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದು, ಗಸ್ತು ನಡೆಸಿ, ಮೊಕ್ಕಂ ಹೂಡಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಭೀಕರ ಹತ್ಯೆ, ನಿಷೇಧಾಜ್ಞೆ ಜಾರಿ