ಶಿವಮೊಗ್ಗ: ಬೈಕ್ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕು ನಾಲೂರು - ಕೊಳಗಿ ಬಳಿ ನಡೆದಿದೆ.
ತೀರ್ಥಹಳ್ಳಿ ತುಂಗಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಬಿ.ಟಿ.ರಾಮಪ್ಪನವರು ಬೈಕ್ನಲ್ಲಿ ಹೋಗುವಾಗ ಎದುರಿಗೆ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.