ಶಿವಮೊಗ್ಗ: ಸೊರಬದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್‌ನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಒಟ್ಟು 12 ಸ್ಥಾನದಲ್ಲಿ 11 ಸ್ಥಾನಗಳಿಸುವ ಮೂಲಕ ಭರ್ಜರಿ ಜಯಗಳಿಸಿದ್ದಾರೆ.
ಒಂದು ಸ್ಥಾನವನ್ನು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಪಡೆದುಕೊಂಡಿದ್ದು, ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಒಂದೂ ಸ್ಥಾನಗಳಿಸದೇ ಭಾರಿ ಮುಖಭಂಗ ಅನುಭವಿಸಿದೆ. ರಾಜ್ಯ ವಿಧಾನಸಭೆ ಉಪಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ ಕಳಪೆ ಸಾಧನೆ ಮಾಡಿತ್ತು.
ಜಯ ಸಾಧಿಸಿದ ಅಭ್ಯರ್ಥಿಗಳಿಗೆ ಮತ್ತು ಕಾರ್ಯಕರ್ತರಿಗೆ ಶಾಸಕ ಕುಮಾರ ಬಂಗಾರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.