ETV Bharat / city

ಶಿವಮೊಗ್ಗದಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಈಶ್ವರಪ್ಪ, ಸಿಟಿ ರವಿ, ಸೋಮಣ್ಣ ಭೇಟಿ..  ಪರಿಹಾರದ ಭರವಸೆ

ಶಿವಮೊಗ್ಗದಲ್ಲಿ ಮಳೆಯ ರೌದ್ರ ನರ್ತನಕ್ಕೆ ಹಲವಾರು ಬಡಾವಣೆಗಳು ಜಲಾವೃತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಕೆ.ಎಸ್. ಈಶ್ವರಪ್ಪ, ಸಿ.ಟಿ. ರವಿ ಹಾಗೂ ವಿ. ಸೋಮಣ್ಣ ಅವರು ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಅಭಯ ನೀಡಿದ್ದಾರೆ.

BJP leaders who promised a proper solution to the people's
author img

By

Published : Aug 11, 2019, 5:14 AM IST

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆಯ ರೌದ್ರ ನರ್ತನಕ್ಕೆ ಹಲವಾರು ಬಡಾವಣೆಗಳು ಜಲಾವೃತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಕೆ.ಎಸ್. ಈಶ್ವರಪ್ಪ, ಸಿ.ಟಿ. ರವಿ ಹಾಗೂ ವಿ. ಸೋಮಣ್ಣ ಅವರು ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್​ನ ಗಣಪತಿ ದೇವಾಲಯದ ಆವರಣದಲ್ಲಿರುವ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಅಭಯ ನೀಡಿದರು.

ನೆರೆ ಉಂಟಾದ ಪರಿಣಾಮ ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡಿದ್ದಾರೆ. ಎಲ್ಲಾ ಸಂತ್ರಸ್ತರಿಗೂ, ಮಳೆ ನಿಂತ ಕೂಡಲೇ ಯಾವ ರೀತಿಯ ಪರಿಹಾರ ನೀಡಬೇಕೆಂಬ ನಿಟ್ಟಿನಲ್ಲಿ, ಚರ್ಚಿಸಿ, ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಡಲಾಗುವುದೆಂದು ಭರವಸೆ ನೀಡಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ವಿಶೇಷ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದಾಗಿಯೂ ತಿಳಿಸಿದರು.

ಭರವಸೆ ನೀಡಿದ ಬಿಜೆಪಿ ನಾಯಕರು
ಇದೇ ವೇಳೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ದಶಕಗಳ ಬಳಿಕ ಇಂತಹದೊಂದು ಜಲಪ್ರಳಯ ಉಂಟಾಗಿದೆ. ಈಗಾಗಲೇ ಸಿಎಂ ನೆರೆ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಹಾರ ಘೋಷಿಸಿದ್ದಾರೆ. ಅಲ್ಲದೇ, ನಾಳೆ ಕೇಂದ್ರ ಗೃಹಮಂತ್ರಿ ಅಮಿತ್​ ತಾ ಅವರು ಬೆಳಗಾವಿ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಬಳಿಕ ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡುವ ವಿಶ್ವಾಸ ಇದೆ ಎಂದರು.

ಶಿವಮೊಗ್ಗ ನಗರದಲ್ಲಿ 253 ಮನೆಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಕಡೆ 721 ಮನೆಗಳು ಬಿದ್ದಿವೆ ಎಂದು ಹೇಳಿದರು.

Intro:ಶಿವಮೊಗ್ಗ,
ಸ್ಲಗ್ : *ಸಂತ್ರಸ್ತರಿಗೆ ಸೂಕ್ತ ಪರಿಹಾರದ ಭರವಸೆ ನೀಡಿದ ಬಿಜೆಪಿ ನಾಯಕರು.*
ಫಾರ್ಮೆಟ್ : ಎವಿಬಿ

ಆ್ಯಂಕರ್..........
ಶಿವಮೊಗ್ಗದಲ್ಲಿ ಮಳೆಯ ರೌದ್ರ ನರ್ತನಕ್ಕೆ ಹಲವಾರು ಬಡಾವಣೆಗಳು ಜಲಾವೃತ ಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರುಗಳಾದ, ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವರುಗಳಾದ ಹಾಗೂ ಶಾಸಕರಾದ ಸಿ.ಟಿ. ರವಿ ಹಾಗೂ ವಿ. ಸೋಮಣ್ಣ ಅವರು, ನಗರದ ರಾಮಣ್ಣ ಶ್ರೇಷ್ಟಿ ಪಾರ್ಕ್ ನ ಗಣಪತಿ ದೇವಾಲಯದ ಆವರಣದಲ್ಲಿರುವ ಸಂತ್ರಸ್ತರ ಕೇಂದ್ರಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ರು. ಸರ್ಕಾರದಿಂದ ಬರುವಂತಹ ಎಲ್ಲಾ ಸವಲತ್ತುಗಳನ್ನು ಕೊಡಿಸುವ ಭರವಸೆಯನ್ನ ವ್ಯಕ್ತಪಡಿಸಿದರು. ಈಗಾಗಲೇ ವಿಪರೀತ ಮಳೆಯ ಕಾರಣದಿಂದಾಗಿ ನೆರೆ ಬಂದಿದೆ. ಈ ಹಿನ್ನೆಲೆಯಲ್ಲಿ ನೂರಾರು ಜನರು ಸಂತ್ರಸ್ತರಾಗಿದ್ದಾರೆ. ಅದರಲ್ಲಿ ಕೆಲವರು ಮನೆ, ಮಠ ಕಳೆದುಕೊಂಡಿದ್ದರೆ, ಮತ್ತೆ ಕೆಲವರು, ನಷ್ಟ ಅನುಭವಿಸಿದ್ದಾರೆ. ಈ ಎಲ್ಲಾ ಸಂತ್ರಸ್ತರಿಗೂ, ಮಳೆ ನಿಂತ ಕೂಡಲೇ ಯಾವ ರೀತಿಯ ಪರಿಹಾರ ನೀಡಬೇಕೆಂಬ ನಿಟ್ಟಿನಲ್ಲಿ, ಚರ್ಚಿಸಿ, ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಡಲಾಗುವುದೆಂದು ಭರವಸೆ ನೀಡಿದ್ರು. ಅಲ್ಲದೇ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ವಿಶೇಷ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದೆಂದು ಬಿಜೆಪಿ ಮುಖಂಡರು ಭರವಸೆ ನೀಡಿದರು.

*ಫ್ಲೋ............*

ಇದೇ ವೇಳೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ರಾಜ್ಯದಲ್ಲಿ ಹಾಗೂ ಶಿವಮೊಗ್ಗದಲ್ಲಿ ದಶಕಗಳ ಬಳಿಕ ಇಂತಹದೊಂದು ಜಲಪ್ರಳಯ ಉಂಟಾಗಿದೆ. ಈಗಾಗಲೇ ಸಿಎಂ ನೆರೆ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಹಾರಗಳನ್ನ ಘೋಷಣೆ ಮಾಡಿದ್ದಾರೆ. ಅಲ್ಲದೇ, ನಾಳೆ ಕೇಂದ್ರದ ಗೃಹ ಮಂತ್ರಿಗಳು, ಬೆಳಗಾವಿ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದು, ಅವರ ಭೇಟಿ ಬಳಿಕ ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ವಿಶ್ವಾಸ ಇದೆ ಎಂದು ಈಶ್ವರಪ್ಪ ಹೇಳಿದ್ರು. ಅಲ್ಲದೇ, ಜಿಲ್ಲೆಯಲ್ಲಿ, 721 ಮನೆಗಳು ಬಿದ್ದಿವೆ. ಶಿವಮೊಗ್ಗ ನಗರದಲ್ಲಿ 253 ಮನೆಗಳು ಬಿದ್ದಿವೆ. ಶಿವಮೊಗ್ಗ ನಗರದಲ್ಲಿ ಅನೇಕ ಬಡಾವಣೆಗಳು ನೆರೆಯಿಂದಾಗಿ ಜಲಾವೃತವಾಗಿವೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ನೀಡಲಾಗುವುದು. ಅಲ್ಲದೆ, ಮುಂದಿನ ದಿನಗಳಲ್ಲಿ ನೆರೆ ಪೀಡಿತ ಎಲ್ಲಾ ಬಡಾವಣೆಗಳಿಗೆ ತೆರಳಿ ಪರಿಶೀಲನೆ ನಡೆಸಿ, ನಷ್ಟ, ಪರಿಹಾರದ ಬಗ್ಗೆ ಚರ್ಚಿಸಿ, ಪರಿಹಾರ ಘೋಷಣೆ ಮಾಡಲಾಗುವುದೆಂದು ಹೇಳಿದರು.

ಬೈಟ್...
ಕೆ.ಎಸ್. ಈಶ್ವರಪ್ಪ, ಮಾಜಿ ಡಿಸಿಎಂ.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.