ಶಿವಮೊಗ್ಗ: ಮಹಾರಾಷ್ಟ್ರ ಹಾಗೂ ಹರಿಯಾಣ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ನಡೆಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ದೇಶದ ಜನತೆ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿಟ್ಟು ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಬಿಜೆಪಿಗೆ ಮತ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿಯು ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸಿತ್ತು. ಇದರಿಂದ ಬಿಜೆಪಿಯು ಶಿವಸೇನೆ ಜೊತೆ ಸೇರಿಯೇ ಸರ್ಕಾರ ರಚನೆ ಮಾಡಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ದೇಶದ ಜನತೆ ಈ ಹಿಂದೆ ಹೇಗೆ ಮೋದಿಯವರಿಗೆ ಬೆಂಬಲ ನೀಡಿ ಮತ ಹಾಕಿದ್ರೋ, ಅದೇ ರೀತಿ ಮಹಾರಾಷ್ಟ್ರ ಹಾಗೂ ಹರಿಯಾಣ ಜನತೆ ಸಹ ಬಿಜೆಪಿ ಮೇಲೆ ನಂಬಿಕೆ ಹೊಂದಿದ್ದಾರೆ ಎಂದು ಈಶ್ವರಪ್ಪ ಅಭಿಪ್ರಾಯಪಟ್ಟರು.