ಶಿವಮೊಗ್ಗ: ಹೈದರಬಾದ್ನಲ್ಲಿ ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹೈದಾರಬಾದ್ನಲ್ಲಿ ನಡೆದ ಈ ಕೃತ್ಯ ದೇಶವೇ ತಲೆ ತಗ್ಗಿಸುವಂತಾಗಿದೆ. ದೇಶದಲ್ಲಿ ಆಗಾಗ್ಗೆ ನಡೆಯುತ್ತಿರುವ ಇಂತಹ ಕೃತ್ಯಗಳನ್ನು ತಡೆಯಲು ಕೇಂದ್ರ ಸರ್ಕಾರ ಒಂದು ರೀತಿಯ ಅಂಕುಶ ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕು. ಈ ರೀತಿ ಮಾಡುವುದರಿಂದ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬಹುದು. ಮಹಿಳಾ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗಳ ಮೂಲಕ ತೆಲಂಗಾಣ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.