ಶಿವಮೊಗ್ಗ: ಮುಂಬರುವ ಎಲ್ಲ ಚುನಾವಣೆಗೆ ಪಕ್ಷವನ್ನು ಗ್ರಾಮ ಮಟ್ಟದಿಂದಲೇ ಸಂಘಟಿಸಬೇಕಾಗಿದೆ. ಹಾಗಾಗಿ ಎಲ್ಲ ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರುಗಳು ಪಕ್ಷ ಸಂಘಟನೆಗಾಗಿ ಕೆಲಸ ಮಾಡುವ ಮೂಲಕ ಗ್ರಾಮದ ಅಭಿವೃದ್ಧಿ ಮಾಡಬೇಕಿದೆ ಎಂದು ಗ್ರಾಮ ಪಂಚಾಯತ್ ಸದಸ್ಯರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕರೆ ನೀಡಿದ್ದಾರೆ.
![bs yadiyurappa talk on organization of party](https://etvbharatimages.akamaized.net/etvbharat/prod-images/13193767_thuxcfef.jpg)
ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ನಿನ್ನೆ ಶಿಕಾರಿಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಸಮಾವೇಶ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಂಬರುವ ಚುನಾವಣೆ ಸೇರಿದಂತೆ ಪಕ್ಷದ ಸಂಘಟನೆಯ ಕುರಿತು ಚರ್ಚೆ ನಡೆಸಿದರು.
ಇದನ್ನೂ ಓದಿ: ಅರಮನೆ ಒಳ ಆವರಣದಲ್ಲಿ ಧಾರ್ಮಿಕ ಪೂಜೆ: ಪ್ರವಾಸಿಗರ ಪ್ರವೇಶ ನಿರ್ಬಂಧ
ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಿವಮೊಗ್ಗ ಮಲೆನಾಡು ಪ್ರಾಧಿಕಾರದ ಅಧ್ಯಕ್ಷರಾದ ಗುರುಮೂರ್ತಿ, ಶಿಕಾರಿಪುರ ರೈತ ಮೋರ್ಚಾ ಅಧ್ಯಕ್ಷ ಪ್ರೇಮ್ ಕುಮಾರ್ ಗೌಡ, ತಾಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಪ್ಪ ನಿಂಬೆಗುದ್ದಿ ಹಾಗೂ ಪಕ್ಷದ ಸ್ಥಳೀಯ ಮುಖಂಡರು, ಕ್ಷೇತ್ರದ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.