ETV Bharat / city

ಭಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ₹25 ಲಕ್ಷದ ಚೆಕ್​ ಹಸ್ತಾಂತರಿಸಿದ ಬಿಎಸ್​​ವೈ - ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ

ಮೃತ ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಮುಖ್ಯಮಂತ್ರಿ ಬಿಎಸ್​ವೈ, ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿದರು.

BS Yediyurappa to hand over RS 25 lakh cheque to harsha family
ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ಚೆಕ್ ವಿತರಿಸಿದ ಬಿ.ಎಸ್​​ ಯಡಿಯೂರಪ್ಪ
author img

By

Published : Mar 6, 2022, 12:54 PM IST

Updated : Mar 6, 2022, 1:15 PM IST

ಶಿವಮೊಗ್ಗ: ಫೆಬ್ರವರಿ 20ರಂದು ದುಷ್ಕರ್ಮಿಗಳಿಂದ ಕೊಲೆಯಾದ ಹರ್ಷನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ನೀಡಿದ 25 ಲಕ್ಷ ರೂ. ಚೆಕ್ ಅ​ನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಸ್ತಾಂತರಿಸಿದರು.

ಇಂದು ಹರ್ಷನ ಮನೆಗೆ ಭೇಟಿ ನೀಡಿದ ಬಿಎಸ್​ವೈ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡುತ್ತಾ, ಹರ್ಷ ಈ ಭಾಗದಲ್ಲಿ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದಿದ್ದು, ಹಿಂದೂ ನಾಯಕನಾಗಿ ಬೆಳೆಯುತ್ತಿದ್ದ. ಇದನ್ನು ಸಹಿಸದೆ ಅವನನ್ನು ಕೊಲೆ ಮಾಡಲಾಗಿದೆ ಎಂದು ದೂರಿದರು.

ಭಾರತದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಗ್ಗಟ್ಟಿನಿಂದ ಬಾಳಬೇಕು. ಪ್ರಧಾನಿ ನರೇಂದ್ರ ಮೋದಿಯವರ ಆಶಯವು ಕೂಡಾ ಅದೇ ಆಗಿದೆ ಎಂದರು.

ಈ ವೇಳೆ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮೇಯರ್ ಸುನೀತ ಅಣ್ಣಪ್ಪ, ಡಿಸಿ ಸೆಲ್ವಮಣಿ ಹಾಗು ಎಸ್ಪಿ ಲಕ್ಷ್ಮಿ ಪ್ರಸಾದ್ ಹಾಜರಿದ್ದರು.

ಇದನ್ನೂ ಓದಿ: 'ಹತ್ಯೆಯಾದ ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ'

Last Updated : Mar 6, 2022, 1:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.