ETV Bharat / city

ವಿಮಾನ ನಿಲ್ದಾಣ ಸ್ಥಾಪನೆ ಸರ್ವತೋಮುಖ ಅಭಿವೃದ್ಧಿಗೆ ನಾಂದಿ: ಬಿ.ಎಸ್.ಯಡಿಯೂರಪ್ಪ

author img

By

Published : Feb 15, 2021, 3:53 PM IST

ಶೀಘ್ರವಾಗಿ ಬೆಳೆಯುತ್ತಿರುವ ಆರ್ಥಿಕ ಮತ್ತು ಪ್ರವಾಸೋದ್ಯಮದ ಪ್ರಾಮುಖ್ಯತೆಯನ್ನು ಗಮದಲ್ಲಿರಿಸಿಕೊಂಡು ಶಿವಮೊಗ್ಗ ಜಿಲ್ಲೆಯ ಭರಣಾಪುರ ಹಾಗೂ ಮದಭಾವಿ ಗ್ರಾಮಗಳಲ್ಲಿನ ಸುಮಾರು 727 ಎಕರೆ ಜಮೀನಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ: ವಿಜಯಪುರದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಿಂದ ಜಿಲ್ಲೆಯ ಪ್ರವಾಸೋದ್ಯಮ, ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗಾವಕಾಶ, ತೋಟಗಾರಿಕೆ ಮತ್ತು ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರಿಯ ಮಾರುಕಟ್ಟೆ ಸಂಪರ್ಕ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಾಂದಿಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.

ವಿಜಯಪುರದಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಶಂಕುಸ್ಥಾಪನೆ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ವರ್ಚುಯಲ್ ಕಾರ್ಯಕ್ರಮದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶೀಘ್ರವಾಗಿ ಬೆಳೆಯುತ್ತಿರುವ ಆರ್ಥಿಕ ಮತ್ತು ಪ್ರವಾಸೋದ್ಯಮದ ಪ್ರಾಮುಖ್ಯತೆ ಗಮದಲ್ಲಿರಿಸಿಕೊಂಡು ಜಿಲ್ಲೆಯ ಭರಣಾಪುರ ಹಾಗೂ ಮದಭಾವಿ ಗ್ರಾಮಗಳಲ್ಲಿನ ಸುಮಾರು 727 ಎಕರೆ ಜಮೀನಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಹಾಗೂ ನಿಂಬೆ ಹಣ್ಣನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತಿದ್ದು, ಒಣ ದ್ರಾಕ್ಷಿ ಮತ್ತು ನಿಂಬೆ ಹಣ್ಣನ್ನು ಹಲವು ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿದೆ. ವಿಮಾನ ನಿಲ್ದಾಣ ಪ್ರಾರಂಭದಿಂದ ಈ ಎಲ್ಲಾ ಚಟುವಟಿಕೆಗಳಿಗೆ ಹೆಚ್ಚಿನ ಮಾರುಕಟ್ಟೆ ಲಭ್ಯವಾಗಲಿದೆ ಎಂದರು.

ವಿಜಯಪುರ ವಿಮಾನ ನಿಲ್ದಾಣದ ಅಭಿವೃದ್ಧಿ ಹಾಗೂ ಕಾರ್ಯಾಚರಣೆಯನ್ನು ಕೇಂದ್ರಿಯ ನಾಗರಿಕ ವಿಮಾನಯಾನ ಸಚಿವಾಲಯದ ಭಾರತೀಯ ವಿಮಾನಯಾನ ಪ್ರಾಧಿಕಾರದೊಂದಿಗೆ ಉಡಾನ್ ಯೋಜನೆಯಡಿ ಸೇರ್ಪಡಿಸಲು ಕ್ರಮವಹಿಸಲಾಗುತ್ತಿದೆ. ಕಾಮಗಾರಿಯನ್ನು ಎ.ಟಿ.ಆರ್-72 ವಿಮಾನಗಳ ಹಾರಾಟಕ್ಕಾಗಿ ನಿರ್ಮಿಸಲಾಗಿದ್ದು, ಮುಂದೆ ಅದನ್ನು ಏರ್‌ ಬಸ್ -320 ಗಳ ಹಾರಾಟಕ್ಕಾಗಿ ವಿಸ್ತರಿಸುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಹೇಳಿದರು.

ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಬೀದರ್​ನಲ್ಲಿ ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗಳು ಶೀಘ್ರಗತಿಯಲ್ಲಿ ನಡೆಯುತ್ತಿದ್ದು, ಅದೇ ರೀತಿ ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಸಹ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಾಸಕ ಅರಗ ಜ್ಞಾನೇಂದ್ರ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.