ಶಿವಮೊಗ್ಗ:ವೇಗವಾಗಿ ಬಂದ ಕಾರೂಂದು ರಸ್ತೆ ಬದಿ ನಿಂತಿದ್ದ ಮೂರು ಬಿಡಾಡಿ ದನಗಳಿಗೆ ಡಿಕ್ಕಿ ಹೊಡೆದ ಅವು ಸ್ಥಳದಲ್ಲೇ ಸಾವನ್ನಪ್ಪಿವೆ.
ಈ ಘಟನೆ ಹೊಸನಗರ ತಾಲೂಕು ಜಯನಗರದ ಬಳಿ ನಡೆದಿದೆ. ಚಾಲಕನ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಎದುರಿಗೆ ಬರುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದರೆ ಸಾಕಷ್ಟು ಅನಾಹುತ ಆಗುತ್ತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದನಗಳಿಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಕಾರು ಪಲ್ಟಿಯಾಗಿದೆ. ಚಾಲಕ ಹಾಗೂ ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಸ್ಥಳೀಯರು ಗಾಯಾಳುಗಳನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.