ETV Bharat / city

ಕೇಂದ್ರ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಅಗತ್ಯ: ಸಂಸದ ಬಿ.ವೈ. ರಾಘವೇಂದ್ರ - ಕೇಂದ್ರ ಯೋಜನೆಗಳ ಕುರಿತು ಬಿ ವೈ ರಾಘವೇಂದ್ರ ಹೇಳಿಕೆ

ಸಂಸದ ಬಿ.ವೈ. ರಾಘವೇಂದ್ರ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

MP B Y Raghavendra meeting in shivamogga
ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ಸಭೆ
author img

By

Published : Mar 12, 2022, 3:30 PM IST

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಜನರ ಜೀವನಮಟ್ಟ ಸುಧಾರಣೆ ಮಾಡುವ ಯೋಜನೆಗಳು ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಕಾಲ ಮಿತಿಯೊಳಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ದೀನ ದಯಾಳ್ ಅಂತ್ಯೋದಯ ಯೋಜನೆ, ಗ್ರಾಮೀಣ ಕೌಶಲ್ಯ ಯೋಜನೆ, ಸಾಮಾಜಿಕ ಭದ್ರತಾ ಯೋಜನೆಗಳು, ಪ್ರಧಾನಮಂತ್ರಿ ಆವಾಸ್ ಯೋಜನೆ, ಗ್ರಾಮ ಜ್ಯೋತಿ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಇದರ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು. ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಮೂಲಸೌಕರ್ಯಗಳ ಕೊರತೆ ಬಗ್ಗೆ ಸ್ಥಳೀಯವಾಗಿ ಜನಪ್ರತಿನಿಧಿಗಳ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸಬೇಕು ಎಂದು ಸೂಚಿಸಿದರು.

ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ಸಭೆ

ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ 36ಲಕ್ಷ ಮಾನವ ದಿನಗಳ ಗುರಿಯಿದ್ದು, ಇದುವರೆಗೆ 34ಲಕ್ಷ ಮಾನವ ದಿನಗಳ ಸಾಧನೆ ಮಾಡಲಾಗಿದೆ. 18,380 ಲಕ್ಷ ರೂ. ವಾರ್ಷಿಕ ಆರ್ಥಿಕ ಗುರಿಯಿದ್ದು, ಈವರೆಗೆ 13,937 ಲಕ್ಷ ರೂ. ಗುರಿಯನ್ನು ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಸ್ತೆ ನಿರ್ಮಾಣ: ಗ್ರಾಮ ಸಡಕ್ ಯೋಜನೆಯಡಿ 74 ಕಿ.ಮೀ ರಸ್ತೆ ನಿರ್ಮಾಣದ ಗುರಿಯಿದ್ದು, ಇದುವರೆಗೆ 64 ಕಿ.ಮೀ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಕಾಮಗಾರಿಯಲ್ಲಿ ಐದು ವರ್ಷದ ನಿರ್ವಹಣೆ ಒಳಗೊಂಡಿದ್ದು, ಸಮರ್ಪಕವಾಗಿ ರಸ್ತೆಯ ನಿರ್ವಹಣೆಯನ್ನು ಕೈಗೊಳ್ಳಬೇಕು. ಯೋಜನೆಯ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ರಸ್ತೆಗಳ ನಿರ್ಮಾಣದ ಬಗ್ಗೆ ಮಾಹಿತಿಯನ್ನು ನೀಡುವಂತೆ ತಿಳಿಸಿದರು.

ಅರಿವು ಮೂಡಿಸಿ: ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕಾರ್ಯ ನಡೆಯಬೇಕು. ರಾಷ್ಟ್ರೀಯ ಕುಟುಂಬ ನೆರವು ಯೋಜನೆ, ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನಗಳು ನಿಗದಿತ ಸಮಯದ ಒಳಗಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಅನುದಾನದ ಬಗ್ಗೆ ಸಾಕಷ್ಟು ಮುಂಚಿತವಾಗಿ ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಅಂಗವಿಕಲರಿಗೆ ಸರ್ಕಾರದಿಂದ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಈ ಕುರಿತು ಜಿಲ್ಲೆಯಾದ್ಯಂತ ಆರೋಗ್ಯ ಶಿಬಿರಗಳನ್ನು ನಡೆಸಲಾಗುತ್ತಿದೆ. ಪ್ರತಿಯೊಬ್ಬರಿಗೂ ಸೌಲಭ್ಯ ದೊರೆಯುವಂತೆ ಖಾತ್ರಿಪಡಿಸಿಕೊಳ್ಭಬೇಕು ಎಂದು ಸಂಸದರು ಹೇಳಿದರು.

ಪ್ರಧಾನಮಂತ್ರಿ ಭೇಟಿ: ಮುಂದಿನ ತಿಂಗಳು ಪ್ರಧಾನಮಂತ್ರಿ ಅವರು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಕೇಂದ್ರದ ಎಲ್ಲಾ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕಿದೆ. ಎಲ್ಲಾ ಅರ್ಹರಿಗೆ ಪಡಿತರ ಚೀಟಿ ಮತ್ತು ಆಯುಷ್ಮಾನ್ ಆರೋಗ್ಯ ಕಾರ್ಡ್ ಈ ತಿಂಗಳ ಅಂತ್ಯದ ಒಳಗಾಗಿ ದೊರೆಯುವಂತೆ ನೋಡಿಕೊಳ್ಳಬೇಕು. ಗ್ರಾಮ ಒನ್ ಸೇವೆ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಅನುಷ್ಠಾನಗೊಳಿಸಲು ಸೂಕ್ತ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚನೆ ನೀಡಿದರು.

ಪ್ರತಿಯೊಬ್ಬರಿಗೂ ನಿವೇಶನ: ಗ್ರಾಮೀಣ ಪ್ರದೇಶದಲ್ಲಿ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸರ್ಕಾರಿ ಜಾಗವನ್ನು ಗುರುತಿಸಿ, ನಿವೇಶನಗಳನ್ನು ಸಿದ್ಧಪಡಿಸಿ ನೀಡಬೇಕು. ಪ್ರತಿಯೊಬ್ಬ ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಿಸಲು ನಿವೇಶನ ಒದಗಿಸಬೇಕು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಮುಳುಗುತ್ತಿರುವ ಹಡಗು.. ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಗ್ಗೆ ಸಿ.ಎಂ. ಇಬ್ರಾಹಿಂ ಅಧಿಕೃತ ಮಾಹಿತಿ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.