ETV Bharat / city

ಪ್ರಧಾನಿ ನೇತೃತ್ವದಲ್ಲಿ ಸಮಗ್ರ ಅಭಿವೃದ್ಧಿ: ಸಂಸದ ಬಿ.ವೈ ರಾಘವೇಂದ್ರ - ಶಿವಮೊಗ್ಗದಲ್ಲಿ ಬಿ ವೈ ರಾಘವೇಂದ್ರ ಹೇಳಿಕೆ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಸಮಗ್ರ ಅಭಿವೃದ್ಧಿ ಸಾಧಿಸಲಾಗುತ್ತಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

MP BY Raghavendra
ಸಂಸದ ಬಿ.ವೈ ರಾಘವೇಂದ್ರ
author img

By

Published : Jun 1, 2022, 12:07 PM IST

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿವಿಧ ಜನ ಕಲ್ಯಾಣ ಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ತಲುಪುತಿದ್ದಾರೆ. ಅವರ ನೇತೃತ್ವದ ಫಲವಾಗಿ ದೇಶದಲ್ಲಿ ಸಮಗ್ರ ಅಭಿವೃದ್ದಿ ಸಾಧಿಸಲಾಗುತ್ತಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

ಆಜಾದಿ ಕಾ ಅಮೃತ್ ಮಹೋತ್ಸವದ ನಿಮಿತ್ತ ಪ್ರಧಾನಿ ಮೋದಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಹಿಮಾಚಲ ಪ್ರದೇಶದ ಶಿಮ್ಲಾದಿಂದ ಕೇಂದ್ರ ಸರ್ಕಾರದ 9 ಸಚಿವಾಲಯದ ಸುಮಾರು 16 ಯೋಜನೆ - ಕಾರ್ಯಕ್ರಮಗಳ ಫಲಾನುಭವಿಗಳೊಂದಿಗೆ ವರ್ಚುಯಲ್ ವೇದಿಕೆ ಮೂಲಕ ಸಂವಾದ ನಡೆಸಿದರು. ಈ ಹಿನ್ನೆಲೆ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಸಂಸದರು ಉದ್ಘಾಟಿಸಿ ಮಾತನಾಡಿದರು.

ಪ್ರಧಾನಿ ನೇತೃತ್ವದಲ್ಲಿ ಸಮಗ್ರ ಅಭಿವೃದ್ದಿ: ಸಂಸದ ಬಿ.ವೈ ರಾಘವೇಂದ್ರ

ಪ್ರಧಾನ ಮಂತ್ರಿಯವರ ನೇತೃತ್ವದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ತಂಡ ಸಾಮಾನ್ಯ ಮತ್ತು ಬಡ ಜನರಿಗೆ ಅನೇಕ ಜನ ಕಲ್ಯಾಣ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ನರೇಂದ್ರ ಮೋದಿಯವರ ಸರ್ಕಾರಕ್ಕೆ ಎರಡು ಅವಧಿ ಸೇರಿ ಇದೀಗ 8 ವರ್ಷ ಪೂರ್ಣಗೊಂಡಿದೆ. ಅವರ ನೇತೃತ್ವದಲ್ಲಿ ದೇಶ ಸರ್ವಾಂಗೀಣ ಅಭಿವೃದ್ದಿ ಕಾಣುತ್ತಿದೆ. ಅಕ್ಕಪಕ್ಕದ ದೇಶದಲ್ಲಿ ಅಕ್ಕಿ, ವಿದ್ಯುತ್ ಎಲ್ಲ ದುಬಾರಿಯಾಗಿದ್ದು, ಜನ ಕತ್ತಲಲ್ಲಿದ್ದಾರೆ. ಆದರೆ, ನಮ್ಮ ಪ್ರಧಾನಿಯವರು ಇಂತಹ ಸಂದರ್ಭದಲ್ಲೂ ಆರ್ಥಿಕವಾಗಿ ಜೀವ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ, ಕೆ.ಬಿ.ಅಶೋಕ್‌ ನಾಯ್ಕ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೇರಿದಂತೆ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.