ಶಿವಮೊಗ್ಗ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು.
ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ 244 ಗ್ರಾಮ ಪಂಚಾಯತ್ಗಳ 2,609 ಸ್ಥಾನಗಳ ಪೈಕಿ 950ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ವಿಜಯಶಾಲಿಗಳಾಗಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಯನ್ನು ಮುಂದಿಟ್ಟುಕೊಂಡು ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಿದೆ. ಜಿಲ್ಲೆಯ ಜನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಬಿಜೆಪಿಯ ಆರು ಜನ ಶಾಸಕರು, ಮೂರು ಎಂಎಲ್ಸಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಮುಖ್ಯಮಂತ್ರಿಗಳ ಅಧಿಕಾರ ಬಲದ ಮೂಲಕ ಹಣ ಹಂಚಿ, ಚುನಾವಣೆ ಮಾಡಿದ್ದಾರೆ.
ಓದಿ: ಫಾಸ್ಟ್ಟ್ಯಾಗ್ ಕಡ್ಡಾಯ ಗಡುವು ಮತ್ತೆ ಮುಂದೂಡಿಕೆ ಮಾಡಿದ ಸಾರಿಗೆ ಸಚಿವಾಲಯ!
ಆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಯಾವುದೇ ಆಮಿಷಗಳನ್ನು ಒಡ್ಡದೇ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಅಭ್ಯರ್ಥಿಗಳಿಗೆ, ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.