ಶಿವಮೊಗ್ಗ: ರಾಜ್ಯಸರ್ಕಾರದ ವಿರುದ್ಧ ಕಾಂಗ್ರೆಸ್ನಿಂದ ಇಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಭದ್ರಾವತಿಯಲ್ಲಿ ನಡೆದ ಪ್ರೋ ಕಬಡ್ಡಿ ಪಂದ್ಯಾವಳಿ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ಪ್ರಕರಣದಲ್ಲಿ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಹಾಗೂ ಅವರ ಕುಟುಂಬದವರ ಮೇಲೆ ಪ್ರಕರಣ ದಾಖಲು ಮಾಡಿ, ಸಂಗಮೇಶ್ವರ್ ಮಗನನ್ನು ಬಂಧಿಸಲಾಗಿತ್ತು. ಹೀಗಾಗಿ, ಬಿಜೆಪಿ ಪಕ್ಷ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ನಗರದ ಸೈನ್ಸ್ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಓದಿ: ಸಿಡಿ ಪ್ರಕರಣ: ರಷ್ಯಾ ವೆಬ್ಸೈಟ್ನಲ್ಲೂ ಅಪ್ಲೋಡ್ ಆಗಿತ್ತಂತೆ ವಿಡಿಯೋ..!?
ಪ್ರತಿಭಟನೆಯಲ್ಲಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 50ಕ್ಕೂ ಹೆಚ್ಚು ಶಾಸಕರು ಹಾಗೂ 20 ಕ್ಕೂ ಹೆಚ್ಚು ಎಂಎಲ್ಸಿಗಳು ಸೇರಿ ಒಟ್ಟು 20 ಸಾವಿರಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.