ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಸೈಬರ್ ಕ್ರೈಮ್ ಪ್ರಕರಣಗಳ ಸಂಖ್ಯೆ ಅಧಿಕವಾಗಿದ್ದು, ಈ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆ ಆಟೋ ಮೂಲಕ ಸೈಬರ್ ಕ್ರೈಮ್ ಕುರಿತು ಜಾಗೃತಿ ಮೂಡಿಸುತ್ತಿದೆ.
ಬ್ಯಾಂಕ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಬ್ಯಾಂಕ್ ಖಾತೆಗೆ ಕನ್ನ ಹಾಕುತ್ತಾರೆ. ಅಧಿಕಾರಿಗಳು ದೂರವಾಣಿ ಮೂಲಕ ಯಾವುದೇ ಮಾಹಿತಿ ಪಡೆಯುವುದಿಲ್ಲ. ಹಾಗಾಗಿ ನಾಗರಿಕರು ಇಂತಹ ಕರೆಗಳ ಬಗ್ಗೆ ಎಚ್ಚರವಹಿಸಬೇಕು. ಅಪರಿಚಿತರ ಕರೆ ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಪ್ರಚಾರ ಮಾಡಲಾಯಿತು.