ETV Bharat / city

ಕಂಟೈನ್‍ಮೆಂಟ್ ವಲಯಗಳನ್ನು ಕಟ್ಟುನಿಟ್ಟಿನಿಂದ ನಿಭಾಯಿಸಬೇಕು: ಜಿಲ್ಲಾಧಿಕಾರಿ - ಶಿವಮೊಗ್ಗ ಲೇಟೆಸ್ಟ್ ನ್ಯೂಸ್

ಕಂಟೈನ್‍ಮೆಂಟ್ ವಲಯವನ್ನು ಕನಿಷ್ಠ 14 ದಿನಗಳಿಗಿಂತ ಮೊದಲು ತೆರವುಗೊಳಿಸಬಾರದು. ಈ ವಲಯಗಳಲ್ಲಿ ಕೊರೊನಾ ತಪಾಸಣೆ ವ್ಯವಸ್ಥಿತವಾಗಿ ನಡೆಸಬೇಕು. ಇದಕ್ಕಾಗಿ ಸಂಚಾರಿ ವಾಹನದ ವ್ಯವಸ್ಥೆ ಮಾಡಬೇಕು. ಪಾಸಿಟಿವ್ ವ್ಯಕ್ತಿಗಳನ್ನು ಹೋಮ್​ ಐಸೋಲೇಷನ್‍ ಆಗಲು ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್​ನಲ್ಲಿರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

Shivamogga
ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್
author img

By

Published : Jun 4, 2021, 7:59 AM IST

ಶಿವಮೊಗ್ಗ: ಕೋವಿಡ್ ಪಾಸಿಟಿವಿಟಿ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ತನಕ ಕಂಟೈನ್‍ಮೆಂಟ್ ವಲಯಗಳನ್ನು ಕಟ್ಟುನಿಟ್ಟಿನಿಂದ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ನಿರ್ವಹಣೆ ಹಾಗೂ ಮಾನ್ಸೂನ್ ಸಿದ್ಧತೆಗಳ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕಂಟೈನ್‍ಮೆಂಟ್ ವಲಯವನ್ನು ಕನಿಷ್ಠ 14 ದಿನಗಳಿಗಿಂತ ಮೊದಲು ತೆರವುಗೊಳಿಸಬಾರದು. ಈ ವಲಯಗಳಲ್ಲಿ ಕೊರೊನಾ ತಪಾಸಣೆ ವ್ಯವಸ್ಥಿತವಾಗಿ ನಡೆಸಬೇಕು. ಇದಕ್ಕಾಗಿ ಸಂಚಾರಿ ವಾಹನದ ವ್ಯವಸ್ಥೆ ಮಾಡಬೇಕು. ಪಾಸಿಟಿವ್ ವ್ಯಕ್ತಿಗಳನ್ನು ಹೋಮ್​ ಐಸೋಲೇಷನ್‍ ಆಗಲು ಅವಕಾಶ ನೀಡದೆ, ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್​ನಲ್ಲಿರಿಸಬೇಕು. ಸಾಗರ, ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕುಗಳಲ್ಲಿ ಹೋಮ್​ ಐಸೋಲೇಷನ್‍ಗೆ ಹೆಚ್ಚಿನ ಅವಕಾಶ ನೀಡಿರುವುದು ಕಂಡು ಬಂದಿದ್ದು, ಇದನ್ನು ಸರಿಪಡಿಸಬೇಕು ಎಂದು ಸೂಚನೆ ನೀಡಿದರು.

ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕೊರೊನಾದಿಂದ ಚೇತರಿಸಿಕೊಳ್ಳುವ ಮಕ್ಕಳ ಆರೋಗ್ಯದ ಮೇಲೆ ಆಶಾ ಕಾರ್ಯಕರ್ತೆಯರು 6 ವಾರಗಳ ಕಾಲ ನಿಗಾ ವಹಿಸಬೇಕು. ಯಾವುದೇ ಮಕ್ಕಳಿಗೆ 3 ದಿನಗಳಿಂದ ಜ್ವರ ನಿರಂತರವಾಗಿ ಬರುತ್ತಿದ್ದರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ಒದಗಿಸಬೇಕು. ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಪೂರಕವಾಗಿ ಬೀಜ, ರಸಗೊಬ್ಬರ, ಕೃಷಿ ಯಂತ್ರೋಪಕರಣಗಳ ದುರಸ್ತಿಯಂತಹ ಅಂಗಡಿಗಳಿಗೆ ಸೀಮಿತ ಅವಧಿಯ ಮಿತಿಗೆ ಒಳಪಟ್ಟು ತೆರೆಯಲು ಅವಕಾಶ ನೀಡಬಹುದಾಗಿದೆ. ಅವಶ್ಯಕ ವಸ್ತುಗಳ ಸಗಟು ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳಿಗೆ ನೇರವಾಗಿ ಸಾಮಾಗ್ರಿ ಪೂರೈಕೆ ಮಾಡಲು ಅವಕಾಶವಿದೆ ಎಂದರು.

ಮಾನ್ಸೂನ್ ಸಿದ್ಧತೆ

ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ನೆರೆ ಹಾವಳಿ ಉಂಟಾಗಬಹುದಾದ ಗ್ರಾಮಗಳು, ಭೂ ಕುಸಿತ ಸಂಭವಿಸಬಹುದಾದ ಸ್ಥಳಗಳು, ನೆರೆ ನೀರಿಗೆ ಮುಳುಗಬಹುದಾದ ಕಿರು ಸೇತುವೆಗಳು, ನೀರು ನಿಲ್ಲಬಹುದಾದ ತಗ್ಗು ಪ್ರದೇಶಗಳು ಇತ್ಯಾದಿಗಳನ್ನು ಗುರುತಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಲಾಶಯಗಳು, ಕೆರೆ ಕಟ್ಟೆಗಳು, ಅಣೆಕಟ್ಟಿನ ನೀರಿನ ಮಟ್ಟದ ಮೇಲೆ ನಿರಂತರ ನಿಗಾ ಇರಿಸಬೇಕು. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ದಿನದ 24 ಗಂಟೆ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಆರಂಭಿಸಬೇಕು. ನಗರ ಪ್ರದೇಶದಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತಾಗಲು ಗಿಡಗಂಟಿಗಳು, ಕಸಕಡ್ಡಿಗಳನ್ನು ತೆರವುಗೊಳಿಸಿ ಸ್ವಚ್ಛ ಮಾಡುವ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಖಾಸಗಿ ಕೋವಿಡ್ ಆಸ್ಪತ್ರೆಗಳಿಗೆ ದಿಢೀರ್ ಭೇಟಿ

ನಗರದ ಕೋವಿಡ್ ಆಸ್ಪತ್ರೆಗಳಾದ ಯೂನಿಟಿ ಹಾಸ್ಪಿಟಲ್, ಮ್ಯಾಕ್ಸ್ , ಮೆಟ್ರೋ, ಯಶೋಧ ಹಾಗೂ ಆರಾಧನ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿ‌ ಕೆ.ಬಿ.ಶಿವಕುಮಾರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಗಳಲ್ಲಿ ಸರ್ಕಾರದ ಆದೇಶದಂತೆ ಕೊರೊನಾ ಚಿಕಿತ್ಸೆಯ ಕುರಿತು ಆಸ್ಪತ್ರೆಯವರು ಕೈಗೊಂಡ ಮಾರ್ಗಸೂಚಿಗಳ ಕುರಿತು ಮಾಹಿತಿ ಪಡೆದುಕೊಂಡರು.

ಇದನ್ನೂ ಓದಿ: ತಜ್ಞರ ತಂಡ ರಚಿಸಿ ಸಮುದಾಯದ ಆರೋಗ್ಯ ಕಾಪಾಡಲು ಈಶ್ವರ್​​ ಖಂಡ್ರೆ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.