ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಹರಕೆರೆ ಬಳಿ ತುಂಗಾ ನದಿಗೆ ಸಣ್ಣದಾಗಿ ನಿರ್ಮಿಸುತ್ತಿರುವ ಬ್ಯಾರೇಜ್ ವೇಳೆ ಶವ ಪತ್ತೆಯಾಗಿದೆ.
ಬ್ಯಾರೇಜ್ ನಿರ್ಮಾಣಕ್ಕೆ ಸಮೀಪದ ಹಿಂದೂ ರುದ್ರಭೂಮಿಯಿಂದ ಮಣ್ಣನ್ನು ತಂದು ಹಾಕಲಾಗುತ್ತಿದೆ. ಈ ಮಣ್ಣಿನಲ್ಲಿ ಶವ ಬಂದಿರಬಹುದೆಂಬ ಅನುಮಾನ ಸ್ಥಳೀಯರದ್ದಾಗಿದೆ.
ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದವರು ಶವ ಇರುವುದನ್ನು ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಈ ಬ್ಯಾರೇಜ್ ಮುಂದೆಯೇ ಶಿವಮೊಗ್ಗಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸ್ಥಳವಿದೆ. ಹಾಗಾಗಿ, ಶವಗಳಿಂದ ಸಾಂಕ್ರಾಮಿಕ ರೋಗ ಬರುವ ಸಾಧ್ಯತೆಗಳಿದ್ದು ಬ್ಯಾರೇಜ್ ನಿರ್ಮಾಣಕ್ಕೆ ಬಂದಿರುವ ಮಣ್ಣನ್ನು ಪರೀಕ್ಷಿಸಬೇಕೆಂದು ಸ್ಥಳೀಯರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ: ವ್ಯಕ್ತಿ ಮೇಲೆ ಕಲ್ಲಿನಿಂದ ಹಲ್ಲೆ ಪ್ರಕರಣದಲ್ಲಿ ಇಬ್ಬರ ಬಂಧನ