ಶಿವಮೊಗ್ಗ: ಭದ್ರಾವತಿಯಲ್ಲಿ ಯುವಕನೊಬ್ಬನ ಮೇಲೆ ಮುಬಾರಕ್ ಅಲಿಯಾಸ್ ಡಿಚ್ಚಿ ಮುಬಾರಕ್ನಿಂದ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಯುವಕ ಸುನೀಲ್ ಎಂದು ಗುರುತಿಸಲಾಗಿದ್ದು, ಭದ್ರಾವತಿಯ ನೆಹರು ನಗರದ ನಿವಾಸಿಯಾಗಿದ್ದಾನೆ. ಇವರು ಇಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೋಗುವಾಗ ಅದೇ ಬಡಾವಣೆಯ ಡಿಚ್ಚಿ ಮುಬಾರಕ್ ಏಕಾಏಕಿ ಸುನೀಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯಿಂದಾಗಿ ಸುನೀಲ್ನ ಮೂಗಿನ ಮೂಳೆ ಮುರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಸುನೀಲ್ನನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಭದ್ರಾವತಿ ಹಳೇ ನಗರ ಪೊಲೀಸ್ ಠಾಣೆಯಲ್ಲಿ 101/2022 ಕಲಂ 341, 323 ರಂತೆ ಪ್ರಕರಣ ದಾಖಲಾಗಿದೆ.

ಮದ್ಯ ಮಾರಾಟ ಬಂದ್: ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣದಲ್ಲಿ ಇಂದು ಮದ್ಯ ಮಾರಾಟ ನಿಷೇಧಿಸಿದೆ. ಬೆಳಗ್ಗೆ 6 ರಿಂದ ರಾತ್ರಿ 12 ರ ತನಕ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಈ ಕುರಿತು ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ಅಂಗಡಿಗಳನ್ನು ಬಂದ್ ಮಾಡಿಸಿ, ಪರಿಶೀಲಿಸಿದ್ದಾರೆ.
ಓದಿ: ಶಿವಮೊಗ್ಗದಲ್ಲಿ ಗುರುವಾರದವರೆಗೆ 144 ಸೆಕ್ಷನ್ ಜಾರಿ.. ಬೈಕ್ನಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ