ETV Bharat / city

ಒಮಿಕ್ರಾನ್:​ ದಾವಣಗೆರೆ, ಶಿವಮೊಗ್ಗದ ಜಿಲ್ಲಾಡಳಿತಗಳಿಂದ ಸಕಲ ಸಿದ್ಧತೆ

ಕೊರೊನಾ, ಒಮಿಕ್ರಾನ್​ ಹಾವಳಿ ಹೆಚ್ಜಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಅಗತ್ಯ ಸಿದ್ಧತೆಗೆ ಮುಂದಾಗಿವೆ. ಈ ನಿಟ್ಟಿನಲ್ಲಿ ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲಾಡಳಿತ ಹೊಸ ಕೊರೊನಾ ರೂಪಾಂತರಿಯನ್ನು ಎದುರಿಸಲು ಸಜ್ಜಾಗಿವೆ.

omicron
ಜಿಲ್ಲಾಡಳಿತ
author img

By

Published : Jan 6, 2022, 3:51 PM IST

Updated : Jan 6, 2022, 4:13 PM IST

ದಾವಣಗೆರೆ/ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ, ಒಮಿಕ್ರಾನ್​ ಭೀತಿ ಶುರುವಾದ ಹಿನ್ನೆಲೆಯಲ್ಲಿ ಸರ್ಕಾರ ಹಲವಾರು ನಿರ್ಬಂಧಗಳನ್ನು ವಿಧಿಸಿ ಆದೇಶಿಸಿದೆ. ಜಿಲ್ಲಾಡಳಿತಗಳು ಕೂಡ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲಾಡಳಿತ ಹೊಸ ಕೊರೊನಾ ರೂಪಾಂತರಿಯನ್ನು ಎದುರಿಸಲು ಸಜ್ಜಾಗಿವೆ.

ದಾವಣಗೆರೆಯಲ್ಲಿ ಕೊರೊನಾ ಪ್ರಕರಣಗಳು ತೀರಾ ಕಡಿಮೆ ಇವೆ. ಇಲ್ಲಿಯವರೆಗೂ ಒಂದೇ ಒಂದು ಒಮಿಕ್ರಾನ್ ಕೇಸ್​ ಪತ್ತೆಯಾಗಿಲ್ಲ. ಆದರೂ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ವಹಿಸಲು ಮುಂದಾಗಿದೆ. ಮಹಾಮಾರಿಯಿಂದ ಕಾಪಾಡಲು ಅವಶ್ಯಕವಾಗಿರುವ ಬೆಡ್, ಆಕ್ಸಿಜನ್, ಔಷಧಿ, ಸಿಬ್ಬಂದಿಯನ್ನು ತಯಾರು ಮಾಡಿಕೊಂಡಿದೆ.

ಜಿಲ್ಲೆಯಲ್ಲಿ ಔಷಧದ ಪ್ರಮಾಣ ಎಷ್ಟಿದೆ ಎಂಬುದರ ಬಗ್ಗೆ ವರದಿ ನೀಡಲು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಾರಾಜ್ ಅವರಿಗೆ ಸೂಚಿಸಲಾಗಿದೆ. ಈಗಾಗಲೇ 3 ಸಾವಿರ ಬೆಡ್​ಗಳ ಸಿದ್ಧತೆ, ಖಾಸಗಿ ಹಾಗೂ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಶೇ.75 ರಷ್ಟು ಬೆಡ್​ಗಳನ್ನು ಮೀಸಲಿಡಲಾಗಿದೆ. ತಾಲೂಕು ಆಸ್ಪತ್ರೆಗಳಲ್ಲೂ ಕೂಡ ಬೆಡ್​ಗಳನ್ನು ಸಿದ್ಧಪಡಿಸಲಾಗಿದೆ.

ಆಕ್ಸಿಜನ್ ಪಾಯಿಂಟ್​ಗಳನ್ನು ಈಗಾಗಲೇ ಟ್ರಯಲ್ ರನ್ ಮಾಡಲಾಗಿದೆ. ವೆಂಟಿಲೇಟರ್, ಐಸಿಯು ಹಾಗೂ ಔಷಧ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 10 ಕೆಎಲ್​ನಷ್ಟು ಆಕ್ಸಿಜನ್ ಇದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದರು.

ಹಿರಿಯ ಅಧಿಕಾರಿಗಳ ಜೊತೆ ಶಿವಮೊಗ್ಗ ಡಿಸಿ ಸಭೆ

ಶಿವಮೊಗ್ಗದಲ್ಲೂ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಕುರಿತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಸರ್ಕಾರದ ನಿಗದಿತ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜು ನಡೆಸಬೇಕು. ಯಾವುದೇ ನಿಗದಿತ ವ್ಯಾಪ್ತಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ ಅದನ್ನು ಕ್ಲಸ್ಟರ್ ಎಂದು ಗುರುತಿಸಬೇಕು ಎಂದು ಅವರು ತಾಕೀತು ಮಾಡಿದ್ದಾರೆ.

ಕ್ಲಸ್ಟರ್ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳನ್ನು ಮುಚ್ಚಲು ಕ್ರಮ ವಹಿಸಲಾಗುವುದು. ಕೋವಿಡ್ ಹರಡುವಿಕೆಯನ್ನು ತಡೆಯಲು ವಸತಿಶಾಲೆಗಳು, ಆಶ್ರಯ ತಾಣಗಳು ಮುಂತಾದ ಕಡೆಗಳಲ್ಲಿ ನಿರಂತರವಾಗಿ ರ್ಯಾಂಡಮ್ ಸ್ಯಾಂಪಲ್ ಸಂಗ್ರಹ ಮಾಡಿ ತಪಾಸಣೆ ನಡೆಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸುವ ಪೂರ್ವದಲ್ಲಿ ಸ್ಥಳೀಯಾಡಳಿತದಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದರು.

ಮಹಾರಾಷ್ಟ್ರ, ಕೇರಳ, ಗೋವಾ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರ ತಪಾಸಣೆ ಮಾಡಬೇಕು. ಇದಕ್ಕಾಗಿ ಶಿವಮೊಗ್ಗ, ಭದ್ರಾವತಿ ಬಸ್ ನಿಲ್ದಾಣ ಹಾಗೂ ಆಗುಂಬೆ ಚೆಕ್‌ಪೋಸ್ಟ್​ನಲ್ಲಿ ವ್ಯವಸ್ಥೆ ಮಾಡಬೇಕು. ಹೊರರಾಜ್ಯ ಮತ್ತು ಹೊರದೇಶಗಳಿಂದ ಬಂದವರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ನಿಗಾ ಇರಿಸಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: Omicron scare: ಮೈಸೂರು ಮೃಗಾಲಯದಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖ.. ಆದಾಯ ಖೋತಾ

Last Updated : Jan 6, 2022, 4:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.