ETV Bharat / city

ಎಂಎಲ್​ಸಿ ಆಯನೂರು ಮಂಜುನಾಥ್ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆ ಸೃಷ್ಟಿಸಿದ ಖದೀಮರು! - ನಕಲಿ ಪೇಜ್ ಕ್ರಿಯೇಟ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಖದೀಮರು

ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಅಕೌಂಟ್ ಕ್ರಿಯೇಟ್ ಮಾಡಿ, ಹಣಕ್ಕೆ ಬೇಡಿಕೆ ಇಡಲಾಗಿದೆ.

ಆಯನೂರು ಮಂಜುನಾಥ್
ಆಯನೂರು ಮಂಜುನಾಥ್
author img

By

Published : Jan 6, 2022, 12:01 PM IST

ಶಿವಮೊಗ್ಗ: ಫೇಸ್​ಬುಕ್​ನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕಾಗಿ ಖದೀಮರು ಬೇಡಿಕೆ ಇಡುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ಮರುಕಳಿಸುತ್ತಿವೆ. ಇಂತಹ ಪ್ರಕರಣಗಳಲ್ಲಿ ಸಾಕಷ್ಟು ಜನ ಕೂಡ ಆನ್​ಲೈನ್​ ಮೂಲಕ ಹಣ ನೀಡಿ ಮೋಸ ಹೋಗಿದ್ದಾರೆ. ಇದೀಗ ಎಂಎಲ್​ಸಿ ಆಯನೂರು ಮಂಜುನಾಥ್ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಹೌದು, ಆಯನೂರು ಮಂಜುನಾಥ್ ಅವರ ಫೋಟೋ ಸಮೇತ ನಕಲಿ ಅಕೌಂಟ್ ಕ್ರಿಯೇಟ್ ಮಾಡಲಾಗಿದೆ.‌ ನಕಲಿ ಅಕೌಂಟ್ ಕ್ರಿಯೇಟ್ ಮಾಡಿದ ಖದೀಮರು, ಫೇಸ್​ಬುಕ್​ನಲ್ಲಿ ಆಯನೂರು ಮಂಜುನಾಥ್ ಅವರ ಸ್ನೇಹಿತರಿಗೆ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಆಯ‌ನೂರು ಮಂಜುನಾಥ್ ಅವರ ಆಪ್ತ ಕಾರ್ಯದರ್ಶಿ ಮಾಹಿತಿ ನೀಡಿದ್ದು, ವಿಧಾನ ಪರಿಷತ್ ಸದಸ್ಯರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಪೇಜ್ ಕ್ರಿಯೇಟ್ ಮಾಡಲಾಗಿದೆ. ದಯವಿಟ್ಟು ಯಾರು ಹಣ ನೀಡಬಾರದು ಎಂದು ವಿನಂತಿಸಿಕೊಂಡಿದ್ದಾರೆ.

ನಕಲಿ ಫೇಸ್​ಬುಕ್​  ಅಕೌಂಟ್
ನಕಲಿ ಫೇಸ್​ಬುಕ್​ ಅಕೌಂಟ್

ಇತ್ತೀಚಿನ ದಿನಗಳಲ್ಲಿ ಈ ರೀತಿ ನಕಲಿ ಪೇಜ್ ಕ್ರಿಯೇಟ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿರುವುದು ಹಾಗೂ ಹಣ ಪಡೆದು ಮೋಸ ಮಾಡುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಸೈಬರ್​ ಕ್ರೈಂ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಫೇಸ್​ಬುಕ್​ ನಕಲಿ ಅಕೌಂಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.