ಶಿವಮೊಗ್ಗ: ಕೇಸರಿ ಶಾಲು, ಹಿಜಾಬ್ ವಿವಾದ ಸಂಬಂಧಿಸಿದಂತೆ ಸರ್ಕಾರದ ಸಮವಸ್ತ್ರ ನೀತಿ ಆದೇಶ ಹೊರಬಿದ್ದಿದೆ. ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆ ನಡೆಯಲಿದೆ. ಆದರೆ ಕೇಸರಿ ಶಾಲು, ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ
ಕಲ್ಲು ತೂರಾಟ:
ಶಿವಮೊಗ್ಗ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೇಸರಿ ಶಾಲು, ಹಿಜಾಬ್ ಬೆಂಬಲಿಗ ವಿದ್ಯಾರ್ಥಿಗಳ ನಡುವೆ ಕಲ್ಲು ತೂರಾಟ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ 4-5 ಮಂದಿಗೆ ಗಾಯಗಳಾಗಿವೆ. ಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.
ಇದನ್ನೂ ಓದಿ: ತ್ಯಾಜ್ಯ ನೀರನ್ನು ಕೆರೆಗೆ ಹರಿಬಿಟ್ಟ ನಗರಸಭೆ ಅಧಿಕಾರಿಗಳ ಬೆವರಿಳಿಸಿದ ಜನರು!