ETV Bharat / city

ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದೇ ತರುತ್ತೇವೆ: ಬಿಎಸ್​​ವೈ ಶಪಥ - ಮತಾಂತರ ಕಾಯ್ದೆ ನಿಷೇಧ ಕಾಯ್ದೆ ಬಗ್ಗೆ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ

ಬೆಳಗಾವಿ ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಈ ರೀತಿಯ ಗಲಭೆ ಮಾಡುವ ಪ್ರಯತ್ನ ಮತ್ತು ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

Former CM BS Yediyurappa
ಮತಾಂತರ ಕಾಯ್ದೆ ನಿಷೇಧ ಕಾಯ್ದೆ ಬಗ್ಗೆ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ
author img

By

Published : Dec 19, 2021, 9:52 AM IST

Updated : Dec 19, 2021, 12:01 PM IST

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ಜೋರಾಗಿದೆ. ಒಂದೆಡೆ ಸರ್ಕಾರ ಕಾಯ್ದೆ ಜಾರಿಗೆ ಸಜ್ಜಾಗಿದ್ದರೆ, ಪ್ರತಿಪಕ್ಷ ಕಾಂಗ್ರೆಸ್​ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಮಧ್ಯೆ ನೂರಕ್ಕೆ ನೂರರಷ್ಟು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದೇ ತರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶಪಥ ಮಾಡಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಬಗ್ಗೆ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಕುರಿತು ತಮ್ಮ ದೃಢವಾದ ನಿಲುವನ್ನು ರಾಜ್ಯದ ಜನರಿಗೆ ತಿಳಿಸಿದ್ದಾರೆ.

B S Yediyurappa reaction on Belagavi riot: ಬೆಳಗಾವಿ ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ಈ ರೀತಿಯ ಗಲಭೆ ಮಾಡುವ ಪ್ರಯತ್ನ ಮತ್ತು ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ವಿಧಾನ ಮಂಡಲದಲ್ಲಿ ಸುದೀರ್ಘ ಚರ್ಚೆ ಮಾಡಿ ಈಗಾಗಲೇ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹ ಸಚಿವರಿಗೆ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಬಂಧಿಸಿಸುವ ಕೆಲಸವಾಗಲಿದೆ ಎಂದು ಬಿಎಸ್​ವೈ ಖಡಕ್​ ಆಗಿ ಹೇಳಿದ್ರು.

ವಿಧಾನ ಮಂಡಲದಲ್ಲಿ ವ್ಯಾಪಕ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಲು ಎಲ್ಲಾ ಕ್ರಮ ಕೈಗೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಅಪರಾಧಿಗಳು ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಈ ಬಗ್ಗೆ ನನಗೆ ಮಾಹಿತಿಯಿಲ್ಲ. ನೀವು(ಮಾಧ್ಯಮದವರು) ಮುಖ್ಯ ಮಂತ್ರಿಗಳನ್ನು ಕೇಳಬೇಕು. ನನಗೆ ಗೊತ್ತಿರುವ ಪ್ರಕಾರ ಈವರೆಗೆ ಯಾವುದೇ ಚರ್ಚೆಯಾಗಿಲ್ಲ. ಬಿ ವೈ ವಿಜಯೇಂದ್ರ ಅವರಿಗೆ ಸ್ಥಾನಮಾನದ ಕುರಿತು ಚರ್ಚೆಯಾಗಿಲ್ಲ. ಅದು ಕೂಡ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಷಯ ಎಂದು ತಿಳಿಸಿದರು.

ಇದನ್ನೂ ಓದಿ: ಎಂಇಎಸ್ ಉದ್ಧಟತನ : ಕನ್ನಡ ಪರ ಸಂಘಟನೆಗಳಿಂದ ಇಂದು ಬೆಳಗಾವಿ ಚಲೋ ಕಾರ್ಯಕ್ರಮ

Last Updated : Dec 19, 2021, 12:01 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.