ಶಿವಮೊಗ್ಗ: ಪುನೀತ್ ರಾಜ್‌ಕುಮಾರ್ ಅವರನ್ನು ನಾಡಿನುದ್ದಗಲಕ್ಕೂ ಜನ ಈ ರೀತಿ ಪ್ರೀತಿಸಲು ಅವರು ಮಾಡಿರುವ ಸಮಾಜಮುಖಿ ಕೆಲಸಗಳೇ ಕಾರಣ. ಎಲ್ಲಾ ಸ್ಥರಗಳನ್ನೂ ಮೀರಿ ಬೆಳೆದ ಹೃದಯವಂತ ಅವರಾಗಿದ್ದು ಅಭಿಮಾನಿಗಳ ಹೃದಯದಲ್ಲಿ ನೆಲೆ ನಿಂತಿದ್ದಾರೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಕೊಂಡಾಡಿದರು.
ಶಿವಮೊಗ್ಗ ತಾಲೂಕು ಚೋಡನಾಳ ಗ್ರಾಮದಲ್ಲಿ ಗುರುವಾರ ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಅವರು, ನಾಡಿಗೆ ಆದರ್ಶ ವ್ಯಕ್ತಿಯಾಗಿರುವ ಪುನೀತ್ ಅವರ ಸ್ಮರಣೆ ಕುರಿತ ಕಾರ್ಯಕ್ರಮಕ್ಕೆ ಹೋಗಲು ನನಗೆ ಬೇಸರವಾಗುತ್ತದೆ. ಅವರ ಬಂಧುವೂ ಆಗಿರುವ ನನಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಅವರ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಾರೆ ಎಂಬ ಆರೋಪ ಬರಬಾರದು. ಅವರು ರಾಜಕೀಯವನ್ನು ಮೀರಿ ಬೆಳೆದವರು. ಈ ಕಾರಣದಿಂದ ನಾನು ಅವರ ಹೆಸರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಭಾಗವಹಿಸದಿರಲು ನಿರ್ಧರಿಸಿದ್ದೇನೆ ಎಂದರು.
ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ, ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಶ್ರೀಧರ್ ಆರ್.ಹುಲ್ತಿಕೊಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಎನ್. ಕೃಷ್ಣಮೂರ್ತಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಇದನ್ನೂ ಓದಿ: ದಿ. ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಿದ ರಾಹುಲ್ ಗಾಂಧಿ