ETV Bharat / city

ಅಂದು ಗೋಕಾಕ್ ಚಳವಳಿ, ಇಂದು ಕುಪ್ಪಳ್ಳಿ ಕಹಳೆ: ಹಂಸಲೇಖ - Kuppalli to Thirthahalli padayatra

ಕುವೆಂಪು ಅಂದರೆ ಕನ್ನಡ, ಬಸವ ಅಂದ್ರೆ ಕರ್ನಾಟಕ. ಕನ್ನಡಕ್ಕೆ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕುಪ್ಪಳ್ಳಿಯಿಂದ ತೀರ್ಥಹಳ್ಳಿವರೆಗೂ ಪ್ರಾರಂಭವಾದ ಪಾದಯಾತ್ರೆಯಲ್ಲಿ ಭಾಗಿಯಾಗಿ ಬೆಂಬಲ ವ್ಯಕ್ತಪಡಿಸಿದರು.

ಹಂಸಲೇಖ
ಹಂಸಲೇಖ
author img

By

Published : Jun 15, 2022, 11:13 AM IST

ಶಿವಮೊಗ್ಗ: ಅಂದು ಗೋಕಾಕ್ ಚಳವಳಿ ನಡೆದಿತ್ತು, ಇಂದು ಕುಪ್ಪಳ್ಳಿಯಿಂದ ಕನ್ನಡದ ಕಹಳೆ ಮೊಳಗಿದೆ. ಕುವೆಂಪು ಅಂದ್ರೆ ಕನ್ನಡ, ಬಸವ ಅಂದ್ರೆ ಕರ್ನಾಟಕ. ಇವರಿಬ್ಬರಿಗೂ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು ಎಂದು ಸಂಗೀತ ನಿರ್ದೇಶಕ ಹಂಸಲೇಖ ಬೇಸರ ವ್ಯಕ್ತಪಡಿಸಿದರು.

ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ ಪಠ್ಯದಿಂದ ಕುವೆಂಪು ಕೃತಿ ಕೈ ಬಿಟ್ಟಿದ್ದನ್ನು ವಿರೋಧಿಸಿ ಕುಪ್ಪಳ್ಳಿಯಿಂದ ತೀರ್ಥಹಳ್ಳಿವರೆಗೂ ಪ್ರಾರಂಭವಾದ ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕನ್ನಡಕ್ಕೆ ಮಹಾಮನೆ ಕಲ್ಯಾಣ, ಕವಿಮನೆ ಕವಿಶೈಲವಾಗಿದೆ. ಕನ್ನಡಕ್ಕೆ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು ಎಂದು ಪ್ರಶ್ನಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಹಂಸಲೇಖ

ತಮಿಳಿಗರ ರೀತಿ ಕನ್ನಡಿಗರು ಭಾಷಾಭಿಮಾನ ಬೆಳೆಸಿಕೊಳ್ಳಬೇಕಿದೆ. ಅಲ್ಲಿ ಭಾಷೆಗೆ ಧಕ್ಕೆಯಾದರೆ ಆಳುವವರು, ವಿಪಕ್ಷದವರು ಎಲ್ಲರೂ ಒಟ್ಟಾಗಿ ಸೇರುತ್ತಾರೆ. ಆ ರೀತಿ ನಾಡಿನಾದ್ಯಂತ ಮೊಳಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ನಮ್ಮದು ನಾಡಗೀತೆ ಅಲ್ಲ, ನಾಡೇ ಒಂದು ಗೀತೆ, ನಾಡೇ ನಮಗೆ ಒಂದು ಧ್ವಜ, ಇವೆರಡಕ್ಕೂ ಅವಮಾನವಾಗಿದೆ. ಕನ್ನಡವನ್ನು ಮುರಿಯುವ ನಡೆ ರಾಜ್ಯದಲ್ಲಿ ಆರಂಭವಾಗಿದೆ. ಕನ್ನಡಪರ ಹೋರಾಟ ನಿರಂತರವಾಗಿ ನಡೆಯಬೇಕು ಎಂದರು.

ಇದನ್ನೂ ಓದಿ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತಗಳಲ್ಲಿ ವ್ಯತ್ಯಾಸ ಕಂಡು ದಂಗಾದ ಅಧಿಕಾರಿಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.