ಶಿವಮೊಗ್ಗ: ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ. ಮೂರು ತಾಲೂಕಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ 6 ನೇ ತಾರೀಖಿನಿಂದ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಮತ್ತೆ ಶಾಲೆಗಳನ್ನು ತೆರೆಯಲಾಗಿತ್ತು. ಆದರೆ ಮಳೆ ನಿಲ್ಲದ ಕಾರಣ ಹಾಗೂ ಹವಾಮಾನ ಇಲಾಖೆಯು ಜುಲೈ 15 ರ ತನಕ ಭಾರೀ ಮಳೆಯಾಗುತ್ತದೆ ಎಂಬ ಮುನ್ನೆಚ್ಚರಿಕೆ ನೀಡಿದ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ಹಾಗೂ ಸೊರಬ ತಾಲೂಕುಗಳಲ್ಲಿ ಮಂಗಳವಾರ ಎಂದಿನಂತೆ ಶಾಲೆ ತೆರೆದಿರುತ್ತದೆ. ಜಿಲ್ಲಾಧಿಕಾರಿಗಳು ಆದೇಶ ನೀಡುವ ಮುನ್ನ ಆಯಾ ತಹಶೀಲ್ದಾರ್ ಬಳಿ ಚರ್ಚೆ ನಡೆಸಿ ರಜೆ ಘೋಷಿಸಲಾಗಿದೆ.
ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕು ಹೊರತುಪಡಿಸಿ ಉಳಿದ ತಾಲೂಕುಗಳಲ್ಲಿ ಎಂದಿನಂತೆ ಶಾಲೆಗಳು ಕಾರ್ಯನಿರ್ವಹಿಸಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
(ಇದನ್ನೂ ಓದಿ: ಜೀವದ ಉಳಿವಿಗೆ ಜೀರೋ ಟ್ರಾಫಿಕ್.. ಮುಸ್ಲಿಂ ಯುವಕನ ಹೃದಯ ಬಡಿತಕ್ಕೆ ಚಾಲನೆ ನೀಡಿದ ಹಿಂದೂ ಬಾಲಕಿ)