ಶಿವಮೊಗ್ಗ: ಜಿಲ್ಲೆಯಾದ್ಯಂತ ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ, ಹೊಸಮನೆ ಬಡಾವಣೆಗಳು ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಸಂಕಷ್ಟ ಎದುರಿಸುವಂತಾಗಿದೆ.
ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ನಗರದ ಅನೇಕ ಬಡಾವಣೆಗಳಿಗೆ ನೀರು ನುಗ್ಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ, ಜನರು ಪಾಲಿಕೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದ ಏಳು ವರ್ಷದ ಮಗುವಿನ ಕಾಲು ಹಾಗೂ ಸೊಂಟಕ್ಕೆ ಗಾಯಗಳಾಗಿದೆ. ಮಂಜನಾಯ್ಕ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮಳೆಯಿಂದ ತೇವಗೊಂಡು ಗೋಡೆ ಕುಸಿದಿದೆ. ಜೊತೆಗೆ ಮಂಜನಾಯ್ಕ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಇದನ್ನೂ ಓದಿ: ದ.ಕನ್ನಡ, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ