ETV Bharat / city

ಶಿವಮೊಗ್ಗ ಕೊಲೆ ಪ್ರಕರಣ: ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರ ಬಂಧನ - ಗೃಹ ಸಚಿವ

ಕೊಲೆ ಪ್ರಕರಣವನ್ನು ಬೇಧಿಸಲು ಪೊಲೀಸರ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂದು ತನಿಖೆಯ ಮೂಲಕ ತಿಳಿಯಬೇಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

author img

By

Published : Feb 21, 2022, 10:54 AM IST

Updated : Feb 21, 2022, 11:21 AM IST

aarga-jnanendra
ಗೃಹ ಸಚಿವ

ಶಿವಮೊಗ್ಗ: ನಗರದಲ್ಲಿ ನಿನ್ನೆ ರಾತ್ರಿ ಹಿಂದುಪರ ಸಂಘಟನೆಯ ಯುವಕನ ಕೊಲೆ ಪ್ರಕರಣದಲ್ಲಿ ಸುಳಿವು ಸಿಕ್ಕಿದೆ. ಶೀಘ್ರವೇ ಕೊಲೆಗಡುಕರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊಲೆ ಪ್ರಕರಣವನ್ನು ಬೇಧಿಸಲು ಪೊಲೀಸರ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂದು ತನಿಖೆಯ ಮೂಲಕ ತಿಳಿಯಬೇಕಿದೆ ಎಂದರು.

ಶಿವಮೊಗ್ಗ ಕೊಲೆ ಪ್ರಕರಣ: ಗೃಹ ಸಚಿವರ ಹೇಳಿಕೆ

ಮೃತ ಯುವಕನ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಕುಟುಂಬಸ್ಥರು ಕೊಲೆಗಾರರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಕೊಲೆಗಾರರ ಸುಳಿವು ಸಿಕ್ಕಿದೆ. ಅವರನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದರು.

ಶಿವಮೊಗ್ಗ ಎಸ್​ಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಕೊಲೆ ನಡೆದಿರುವುದು ದುರದೃಷ್ಟಕರವಾಗಿದೆ. ಈ ರೀತಿ ಕೊಲೆ ಮಾಡುವ ವಿಕೃತತೆಯನ್ನು ಬಿಡಬೇಕು. ಜನ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಮನವಿ ಮಾಡಿದರು.

shivamogga murder case
ಮೃತ ಯುವಕನ ಕುಟುಂಬಸ್ಥರನ್ನು ಭೇಟಿ ಮಾಡಿದ ಗೃಹ ಸಚಿವರು

ಶಿವಮೊಗ್ಗದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಹಾಗೂ ಆರ್​ಎಎಫ್ ನಿಯೋಜನೆ ಮಾಡಲಾಗಿದೆ. ಕೊಲೆಯಾದ ಯುವಕನ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರ ಜೊತೆ ಮಾತನಾಡುತ್ತೇನೆ ಎಂದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಭೀಕರ ಹತ್ಯೆ, ನಿಷೇಧಾಜ್ಞೆ ಜಾರಿ

Last Updated : Feb 21, 2022, 11:21 AM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.