ಶಿವಮೊಗ್ಗ: ವೀರ ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರದಲ್ಲಿ ವಿವಾದ ಉಂಟಾಗಿ ಚಾಕು ಇರಿದಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಫ್ಲೆಕ್ಸ್ ವಿಚಾರದಲ್ಲಿ ಸಂಘರ್ಷವಾಗಿದೆ. ನಮ್ಮ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು, ಎಲ್ಲವನ್ನು ಸಮಾಧಾನ ಪಡಿಸುತ್ತಿದ್ದರು. ಆದರೆ, ಎಂ.ಕೆ.ಕೆ ರಸ್ತೆ ತಿರುವಿನಲ್ಲಿ ಚಾಕು ಇರಿತವಾಗಿದೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಕೃತ್ಯದಲ್ಲಿ ಭಾಗಿಯಾದವರ ಮಾಹಿತಿ ಲಭ್ಯವಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ಎಡಿಜಿಪಿ ಅಲೋಕ್ ಕುಮಾರ್ ಶಿವಮೊಗ್ಗಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ. ಚಾಕು ಇರಿತ ಪ್ರಕರಣದಲಿ ಒಟ್ಟು ನಾಲ್ವರು ಆರೋಪಿಗಳಿದ್ದು, ಇದರಲಿ ನದೀಮ್(25) ಹಾಗೂ ಅಬ್ದುಲ್ ರೆಹಮಾನ್(25)ರನ್ನು ದಸ್ತಗಿರಿ ಮಾಡಲಾಗಿದೆ. ಇನ್ನಿಬ್ಬರ ಹುಡುಕಾಟಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಬಂದೋ ಬಸ್ತ್ ಮಾಡಲಾಗಿದೆ ಎಂದರು.
ಇದನ್ನೂ ಓದಿ: ಶಿವಮೊಗ್ಗ ಚಾಕು ಇರಿತ ಆರೋಪಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ