ಶಿವಮೊಗ್ಗ: ಜಿಂಕೆಯನ್ನು ಬೇಟೆಯಾಡಿ ಮಾಂಸ ಹಾಗೂ ಚರ್ಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂಸಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಆಡುಗಡಿ ಗ್ರಾಮದ ಬಳಿಯ ಮಂಡಗಟ್ಟ ಅರಣ್ಯ ಪ್ರದೇಶದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸ ಹಾಗೂ ಚರ್ಮ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ನವೀನ್ ಮಠಪತಿ ನೇತೃತ್ವದ ತಂಡ ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಆಡುಗಡಿ ಗ್ರಾಮದ ಅನಿಲ್ ಹಾಗೂ ಹನುಮಂತ ಬಂಧಿತ ಆರೋಪಿಗಳು. ಬಂಧಿತರಿಂದ 40 ಕೆ.ಜಿ ಜಿಂಕೆ ಮಾಂಸ, ಚರ್ಮವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.