ETV Bharat / city

ಶಿವಮೊಗ್ಗದ ದೊಡ್ಡಪೇಟೆ-ಜಯನಗರ ಪೊಲೀಸ್ ಠಾಣೆಗಳಲ್ಲಿ ಕಾನೂನು ಸೇವಾ ಕೇಂದ್ರ ಉದ್ಘಾಟನೆ - shimoga news

ಸುಪ್ರೀಂಕೋರ್ಟ್ ಆದೇಶದನ್ವಯ, ಪ್ರತಿಯೊಬ್ಬನ ವೈಯಕ್ತಿಕ ಸ್ವಾತಂತ್ರ್ಯ ರಕ್ಷಿಸುವ ಉದ್ದೇಶದಿಂದ, ದಸ್ತಗಿರಿ ಮಾಡಿದಾಗ ಅನುಸರಿಸಬೇಕಾದ ಕ್ರಮಗಳ ಅನುಷ್ಟಾನ ಖಾತ್ರಿಪಡಿಸುವ ಸಲುವಾಗಿ ಪೊಲೀಸ್ ಠಾಣೆಗಳಲ್ಲಿ ಕಾನೂನು ಸೇವಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ.

Inauguration of Legal Services Center in shimoga
ಶಿವಮೊಗ್ಗದ ದೊಡ್ಡಪೇಟೆ-ಜಯನಗರ ಪೋಲೀಸ್ ಠಾಣೆಗಳಲ್ಲಿ ಕಾನೂನು ಸೇವಾ ಕೇಂದ್ರ ಉದ್ಘಾಟನೆ
author img

By

Published : Mar 11, 2020, 9:00 PM IST

ಶಿವಮೊಗ್ಗ: ದೊಡ್ಡಪೇಟೆ ಹಾಗೂ ಜಯನಗರ ಪೊಲೀಸ್ ಠಾಣೆಗಳಲ್ಲಿ ಕಾನೂನು ನೆರವು ಕೇಂದ್ರವನ್ನು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಜಿ.ಬಸವರಾಜ್ ಉದ್ಘಾಟಿಸಿದರು.

ಶಿವಮೊಗ್ಗದ ದೊಡ್ಡಪೇಟೆ-ಜಯನಗರ ಪೊಲೀಸ್ ಠಾಣೆಗಳಲ್ಲಿ ಕಾನೂನು ಸೇವಾ ಕೇಂದ್ರದ ಉದ್ಘಾಟನೆ ನಡೆಯಿತು.

ಈ ವೇಳೆ ಮಾತನಾಡಿದ ಅವರು, ಯಾವುದೇ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಕರೆತರುವ ವ್ಯಕ್ತಿಗಳಿಗೆ ಬಂಧನಪೂರ್ವ ಕಾನೂನು ನೆರವು ಒದಗಿಸುವ ಉದ್ದೇಶದಿಂದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಾನೂನು ಸೇವಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಸುಪ್ರೀಂಕೋರ್ಟ್ ಆದೇಶದನ್ವಯ, ಪ್ರತಿಯೊಬ್ಬನ ವೈಯಕ್ತಿಕ ಸ್ವಾತಂತ್ರ್ಯ ರಕ್ಷಿಸುವ, ದಸ್ತಗಿರಿ ಮಾಡಿದಾಗ ಅನುಸರಿಸಬೇಕಾದ ಕ್ರಮಗಳ ಅನುಷ್ಟಾನ ಖಾತ್ರಿಪಡಿಸುವ ಉದ್ದೇಶದಿಂದ ಪೊಲೀಸ್ ಠಾಣೆಗಳಲ್ಲಿ ಕಾನೂನು ಸೇವಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಠಾಣೆಗಳಲ್ಲಿ ಕಾನೂನು ಸೇವಾ ಕೇಂದ್ರಗಳನ್ನು ತೆರೆಯುವ ಗುರಿ ಹೊಂದಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಅಪರ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೇಖರ ಹೆಚ್.ಟಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್.ಸರಸ್ವತಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್.ದೇವೇಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.