ETV Bharat / city

ವಿಶೇಷ ಕತೃತ್ವ ಶಕ್ತಿ ಹೊಂದಿದ ಮಹಾನ್ ಪುರುಷ ಅಪ್ಪಣ್ಣ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ಭಾಗಿಯಾದರು.

K S Eshwarappa
ಕೆ.ಎಸ್.ಈಶ್ವರಪ್ಪ
author img

By

Published : Jul 13, 2022, 8:16 PM IST

ಶಿವಮೊಗ್ಗ: ಹಡಪದ ಅಪ್ಪಣ್ಣ ಹನ್ನೆರಡನೇ ಶತಮಾನದಲ್ಲಿ ಇದ್ದ ಮೇಲು - ಕೀಳೆಂದು ಅಸಮಾನತೆಯನ್ನು ಗೆದ್ದು ನಿಂತವರು. ವಿಶೇಷ ಕತೃತ್ವ ಶಕ್ತಿ ಹೊಂದಿದ್ದ ಮಹಾನ್ ಪುರುಷ. ವಿಶ್ವದ ಪ್ರಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಯ ಅನುಭವ ಮಂಟಪದ ಪ್ರಧಾನ ಕಾರ್ಯದರ್ಶಿಯಾಗಿ ಅತ್ಯಂತ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದವರು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಶ್ರೀ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಶೇಷ ಕತೃತ್ವ ಶಕ್ತಿ ಹೊಂದಿದ ಮಹಾನ್ ಪುರುಷ ಅಪ್ಪಣ್ಣ

ಜಾತಿವಾದವನ್ನು ದೂರ ಮಾಡಿ ನಾವೆಲ್ಲರೂ ಒಂದೇ ಎಂದು ಅಂದು ಬಸವಾದಿ ಶರಣರು ಒಟ್ಟಾಗಿ ಕೆಲಸ ಮಾಡಿದ್ದರು. ಆ ಕೆಲಸ ಅಷ್ಟು ಸುಲಭದ್ದಲ್ಲ. ಆದರೆ, ಇಂದು ಪರಿಸ್ಥಿತಿ ಬದಲಾಗಿದೆ. ಇಂತಹ ಸ್ಥಿತಿಯಲ್ಲಿ ನಾವೆಲ್ಲ ಇಂತಹ ಮಹಾನ್ ಪುರುಷರ ಆಚಾರ, ವಿಚಾರ, ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಸಾಗಬೇಕು ಎಂದು ಕಿವಿಮಾತು ಹೇಳಿದ ಅವರು ಹಡಪದ ಸಮಾಜದೊಂದಿಗೆ ತಾವು ಎಂದಿಗೂ ಇದ್ದು ಶಿಕ್ಷಣ ಮತ್ತಿತರ ಸೌಲಭ್ಯಗಳಿಗೆ ಸಹಕರಿಸುವುದಾಗಿ ತಿಳಿಸಿದರು.

ಸೂಡಾ ಅಧ್ಯಕ್ಷ ಎನ್.ಜಿ. ನಾಗರಾಜ್, ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ಪಾಲಿಕೆ ಉಪ ಆಯುಕ್ತ ಶಂಕರ ಗನ್ನಿ, ಸದಸ್ಯರಾದ ವಿಶ್ವಾಸ್, ಜ್ಞಾನೇಶ್ವರ್ ಶಿವಮೊಗ್ಗ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷ ಹೆಚ್.ಎಸ್. ವೀರಭದ್ರಯ್ಯ ಮತ್ತಿತರರಿದ್ದರು.

ಇದನ್ನೂ ಓದಿ: ವಿಮಾನ ನಿಲ್ದಾಣಗಳನ್ನು ರಾಜ್ಯ ಸರ್ಕಾರದ ಸುಪರ್ದಿಗೆ ನೀಡುವಂತೆ ಕೇಂದ್ರದ ಬಳಿ ಕೋರಿಕೆ: ವಿ.ಸೋಮಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.