ಶಿವಮೊಗ್ಗ: ಬಿಸಿಯೂಟ ರಾಜ್ಯ ಸಂಘಟನೆಯ ಅಧ್ಯಕ್ಷರ ಮೇಲೆ ಹಾಕಿರುವ ಕೇಸ್ ಅನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಮ್ಮ ಬೇಡಿಕೆಗಳನ್ನು ಈಡೇರಿಸಿದ್ದರೆ ನಾವು ಯಾಕೆ ಪ್ರತಿಭಟನೆ ಮಾಡುತ್ತಿದ್ದೆವು. ಕಾರ್ಮಿಕರಿಗೆ ಹೆಚ್ಚು ಸಂಬಳ ನೀಡದಿರುವ ಹಿನ್ನೆಲೆ ಪ್ರತಿಭಟನೆ ಮಾಡಲಾಗಿದೆ. ಆದರೆ ಪ್ರತಿಭಟನೆಗೆ ತೆರಳಿದ ನಮ್ಮನ್ನು ಕಳ್ಳರ ರೀತಿಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಬಂಧಿಸಿರುವ ರಾಜ್ಯ ಸರ್ಕಾರಕ್ಕೆ ನಾಚಿಕೆ ಆಗಬೇಕು. ಹಾಗು ಕೂಡಲೇ ನಮ್ಮ ಸಂಘಟನೆಯ ನಾಯಕರುಗಳ ಮೇಲೆ ಹಾಕಿರುವ ಕೇಸ್ಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.