ಶಿವಮೊಗ್ಗ: ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಪ್ರತಿಭಟಿಸಲಾಯಿತು.
ನಂಜನಗೂಡು ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಡಾ. ನಾಗೇಂದ್ರ ಅವರ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿಯ ಕರ್ತವ್ಯಕ್ಕೆ ಒತ್ತಡ ಹೇರಬಾರದು ಎಂದು ಆಗ್ರಹಿಸಿದರು.
ಮೈಸೂರು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಮಿಶ್ರಾ ಅವರನ್ನು ಕೂಡಲೇ ವಜಾಗೊಳಿಸಬೇಕು ಹಾಗೂ ವೈದ್ಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.