ಶಿವಮೊಗ್ಗ: ಜಗತ್ ಪ್ರಸಿದ್ಧ ಜೋಗ ಜಲಪಾತ ಹಾಗೂ ಕುಪ್ಪಳ್ಳಿಯ ಕವಿಮನೆ ಇಂದಿನಿಂದ ಪ್ರವಾಸಿಗರ ವೀಕ್ಷಣೆಗೆ ದೊರೆಯಲಿದೆ. ಕಳೆದೊಂದು ವಾರದಿಂದ ಮಲೆನಾಡು ಪ್ರದೇಶಗಳಲ್ಲಿ ಸುರಿಯುತ್ತಿರುವ ಮುಂಗಾರು ಮಳೆಯು ಜೋಗ ಜಲಪಾತದ ಸೊಬಗು ಹೆಚ್ಚಿಸಿದೆ.
ಪ್ರವಾಸಿಗರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಕಳೆದೆರಡು ತಿಂಗಳಿನಿಂದ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.
ಇದನ್ನೂ ಓದಿ: ಊಟ ಹಾಕಿದ ತಾಯಿಯನ್ನೇ ಕಾಮಿಸಿದವರು : ಚೆಲುವರಾಯಸ್ವಾಮಿ ವಿರುದ್ಧ ಶಾಸಕ ಸುರೇಶ್ ಗೌಡ ವ್ಯಂಗ್ಯ