ETV Bharat / city

ಅವೈಜ್ಞಾನಿಕ ಕೆರೆ ಅಭಿವೃದ್ಧಿ ಯೋಜನೆ ಕೈಬಿಡಿ: ಅಶೋಕ್ ಯಾದವ್ ಆಗ್ರಹ - Unscientific lake development project

ಸೋಮಿನಕೊಪ್ಪ ಗ್ರಾಮದ ಸರ್ವೇ ನಂಬರ್ 47ರ ಕೆರೆಯನ್ನು ನಗರಾಭಿವೃದ್ಧಿ ಪ್ರಾಧಿಕಾರದವರು ಅವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುರುವುದನ್ನು ಕೂಡಲೇ ಕೈಬಿಡಬೇಕೆಂದು ಅಣ್ಣಾ ಹಜಾರೆ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಯಾದವ್ ಆಗ್ರಹಿಸಿದ್ದಾರೆ.

ಅವೈಜ್ಞಾನಿಕ ಕೆರೆ ಅಭಿವೃದ್ಧಿ ಯೋಜನೆ ಕೈಬಿಡಿ: ಅಶೋಕ್ ಯಾದವ್ ಆಗ್ರಹ
author img

By

Published : Sep 28, 2019, 10:39 AM IST

ಶಿವಮೊಗ್ಗ: ಸೋಮಿನಕೊಪ್ಪ ಗ್ರಾಮದ ಸರ್ವೇ ನಂಬರ್ 47ರ ಕೆರೆಯನ್ನು ನಗರಾಭಿವೃದ್ಧಿ ಪ್ರಾಧಿಕಾರದವರು ಅವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುವುದನ್ನು ಕೂಡಲೇ ಕೈಬಿಡಬೇಕೆಂದು ಅಣ್ಣಾ ಹಜಾರೆ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಯಾದವ್ ಆಗ್ರಹಿಸಿದ್ದಾರೆ.

ಅವೈಜ್ಞಾನಿಕ ಕೆರೆ ಅಭಿವೃದ್ಧಿ ಯೋಜನೆ ಕೈಬಿಡಿ: ಅಶೋಕ್ ಯಾದವ್ ಆಗ್ರಹ

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ವೇ ನಂಬರ್ 47ರಲ್ಲಿ ಕೆರೆ ಸುಮಾರು 110 ಎಕರೆ ವಿಸ್ತೀರ್ಣದಲ್ಲಿದೆ. ಆದರೆ ಒತ್ತುವರಿಯಾಗಿ ಕೇವಲ 106 ಎಕರೆ ಜಾಗ ಉಳಿದಿದೆ ಎಂದು ಹೇಳಲಾಗ್ತಿದೆ. ಈ ಕೆರೆಯನ್ನು ಈಗ ಅವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುವ ಹುನ್ನಾರ ಕೂಡ ನಡೆಯುತ್ತಿದೆ ಎಂದು ಆರೋಪಿಸಿದರು.

ಸುಮಾರು 5.77 ಕೋಟಿ ರೂಗಳ ವೆಚ್ಚದಲ್ಲಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ವಾಕಿಂಗ್ ಪಾಥ್​​ಗಾಗಿಯೇ ಎರಡು ಕೋಟಿ ರೂ ಖರ್ಚು ಮಾಡಲಾಗ್ತಿದೆ. 36 ಲಕ್ಷ ರೂಗಳ ವೆಚ್ಚದಲ್ಲಿ ಪ್ಲೇಗ್ರೌಂಡ್ ನಿರ್ಮಾಣವಾಗುತ್ತಿದೆ. ಸ್ಟೋರೇಜ್ ರೂಮ್​​ಗಾಗಿ 2.75 ಲಕ್ಷ ಖರ್ಚು ಮಾಡಲಾಗುತ್ತಿದೆ. ಒಟ್ಟಾರೆಯಾಗಿ ಇದೊಂದು ದುಡ್ಡು ಹೊಡೆಯುವ ಯೋಜನೆಯಾಗಿದೆ ಎಂದು ಆರೋಪಿಸಿದರು.

ಈ ಬಗ್ಗೆ ಹಲವಾರು ಬಾರಿ ದೂರು ನೀಡಿ, ಮನವಿ ಮಾಡಿದ್ರೂ ಕೂಡ ಏನೂ ಪ್ರಯೋಜನವಾಗ್ತಿಲ್ಲ. ಆದ್ದರಿಂದ ಈ ಯೋಜನೆ ಕೈಬಿಡಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

Intro:ಶಿವಮೊಗ್ಗ,
ಸೋಮಿನಕೊಪ್ಪ ಗ್ರಾಮದ ಸರ್ವೆ ನಂಬರ್ 47ರ ಕೆರೆಯನ್ನು ನಗರಾಭಿವೃದ್ಧಿ ಪ್ರಾಧಿಕಾರದವರು ಅವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುತ್ತಿರುವ ಯೋಜನೆ ಯನ್ನು ಕೂಡಲೇ ಕೈ ಬಿಡಬೇಕೆಂದು ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಯಾದವ್ ಆಗ್ರಹಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸರ್ವೇ ನಂಬರ್ 47 ರಲ್ಲಿ ಕೆರೆ ಸುಮಾರು 110 ಎಕರೆ ಇದೆ ಆದರೆ ಅದು ಒತ್ತುವರಿಯಾಗಿ ಕೇವಲ 106 ಎಕರೆ ಉಳಿದಿದೆ ಎಂದು ಹೇಳಲಾಗುತ್ತಿದೆ .
ಈ ಕೆರೆಯನ್ನು ಈಗ ಅವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುವ ಹುನ್ನಾರ ಸೂಡಾದಿಂದ ನಡೆಯುತ್ತಿದೆ ಎಂದು ಆರೋಪಿಸಿದರು.

Body:ಸುಮಾರು 5.77 ಕೋಟಿ ರೂಗಳ ವೆಚ್ಚದಲ್ಲಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.
ವಾಕಿಂಗ್ ಪಾಥ್ ಗಾಗಿಯೇ ಎರಡು ಕೋಟಿ ಖರ್ಚು ಮಾಡಲಾಗುತ್ತಿದೆ .
36 ಲಕ್ಷ ರೂಗಳ ವೆಚ್ಚದಲ್ಲಿ ಪ್ಲೇಗ್ರೌಂಡ್ ನಿರ್ಮಾಣವಾಗುತ್ತಿದೆ.
ಸ್ಟೋರೇಜ್ ರೂಮ್ ಗಾಗಿ 2.75 ಲಕ್ಷ ಖರ್ಚು ಮಾಡಲಾಗುತ್ತಿದೆ ಒಟ್ಟಾರೆಯಾಗಿ ಇದೊಂದು ದುಡ್ಡು ಹೊಡೆಯುವ ಯೋಜನೆಯಾಗಿದೆ ಎಂದು ಆರೋಪಿಸಿದರು.
. ಈ ಬಗ್ಗೆ ಹಲವಾರು ಬಾರಿ ದೂರು ನೀಡಿದರೂ ಮನವಿ ಮಾಡಿದರು ಕೂಡ ಏನೂ ಪ್ರಯೋಜನವಾಗುತ್ತಿಲ್ಲ ಆದ್ದರಿಂದ ಯೋಜನೆ ಕೈಬಿಡಬೇಕು ಇಲ್ಲವಾದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ
ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.