ಶಿವಮೊಗ್ಗ: ಸಾಗರ ವಿಭಾಗಿಯ ಆಸ್ಪತ್ರೆಯಲ್ಲಿ ಸರ್ಜನ್ ಆಗಿ ಕೆಲಸಮಾಡುತ್ತಿದ್ದ ಡಾ. ಪ್ರಕಾಶ್ ಬೋಸ್ಲೆ ಅವರಿಗೆ ಜೀವ ಬೆದರಿಕೆ ಹಾಕಿರುವ ತಾಲೂಕು ಪಂಚಾಯತಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ಹಾಗು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಇತ್ತೀಚಿಗೆ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಸಾಗರ ಆಸ್ಪತ್ರೆಯಲ್ಲಿ ಸಿವಿಲ್ ಸರ್ಜನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಸ್ಲೆ ಅವರ ಮೇಲೆ ಹಲ್ಲೆ ಪ್ರಯತ್ನ ನಡೆಸಿದ್ದರಲ್ಲದೇ, ಜೀವ ಬೆದರಿಕೆ ಸಹ ಹಾಕಿದ್ದರು. ಹಾಗಾಗಿ ಅವರ ಮೇಲೆ ಕ್ರಮ ಕೈಗೋಳ್ಳಬೇಕು ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.