ETV Bharat / city

ಮಧು ಬಂಗಾರಪ್ಪ ಕಾಂಗ್ರೆಸ್ ಸೇರುತ್ತಿರುವುದು ಪಕ್ಷಕ್ಕೆ ಬಲ ನೀಡಿದೆ: ಶಾಂತವೀರ ನಾಯ್ಕ್‌ - ಜುಲೈ 30ರಂದು ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಮೆಚ್ಚಿ ಹಾಗೂ ಕಾಂಗ್ರೆಸ್​ನಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂಬುದನ್ನು ಅರಿತು ಇದೇ ತಿಂಗಳ 30ರಂದು ಮಧು ಬಂಗಾರಪ್ಪ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶಾಂತವೀರ ನಾಯ್ಕ್‌ ತಿಳಿಸಿದರು.

Shanthweera Naik
ಶಾಂತವೀರ ನಾಯ್ಕ್‌
author img

By

Published : Jul 29, 2021, 9:39 AM IST

ಶಿವಮೊಗ್ಗ: ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಪಕ್ಷಕ್ಕೆ ಬಲ ನೀಡಿದೆ ಎಂದು ಕಾಂಗ್ರೆಸ್ ಮುಖಂಡ ಶಾಂತವೀರ ನಾಯ್ಕ್‌ ಹೇಳಿದರು.

ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಪಕ್ಷಕ್ಕೆ ಬಲ ನೀಡಿದೆ: ಶಾಂತವೀರ ನಾಯ್ಕ್‌

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೊರಬ ಕ್ಷೇತ್ರದ ಮಾಜಿ ಶಾಸಕ ಹಾಗೂ ಜಿಲ್ಲೆಯ ಬಗರ್ ಹುಕ್ಕುಂ ಸಾಗುವಳಿ ಹೋರಾಟಗಾರ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್​ಗೆ ಸೇರ್ಪಡೆ ಆಗುತ್ತಿರುವುದು ಪಕ್ಷಕ್ಕೆ ಮತ್ತಷ್ಟು ಬಲ ನೀಡಿದೆ. ಪಕ್ಷದ ತತ್ವಸಿದ್ಧಾಂತ ಮೆಚ್ಚಿ ಹಾಗೂ ಕಾಂಗ್ರೆಸ್​ನಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂಬುದನ್ನು ಅರಿತು ಇದೇ ತಿಂಗಳ 30ರಂದು ಹುಬ್ಬಳ್ಳಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ.

ಮಧು ಬಂಗಾರಪ್ಪ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಿಷ್ಠವಾಗಿಸಲು ಸಹಕಾರಿ ಆಗಲಿದೆ. ಹಾಗಾಗಿ, ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು, ಮಧು ಬಂಗಾರಪ್ಪ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: ಖತರ್ನಾಕ್​ ಕಿಲ್ಲರ್​ ದಂಪತಿ.. ಗಂಡ 8, ಹೆಂಡ್ತಿ 12, ಇದು ಇವರ Murder ಟ್ರ್ಯಾಕ್​ ರೆಕಾರ್ಡ್​!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.