ಶಿವಮೊಗ್ಗ: ರಾಜ್ಯ ಸರ್ಕಾರ ತಕ್ಷಣವೇ ನ್ಯಾ.ಎ ಜೆ ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕೆಂದು ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹಿಸಿದೆ.
ಶತಮಾನಗಳಿಂದ ಶೋಷಣೆಗೊಳಗಾಗಿ ಈಗಲೂ ಸಹ ಮೀಸಲಾತಿಯಲ್ಲಿ ಅವಕಾಶ ಸಿಗದೇ ವಂಚಿತರಾಗಿರುವ ನಮ್ಮ ಸಮುದಾಯದ ಆಶಾಕಿರಣ ನ್ಯಾ. ಎ ಜೆ ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಕೂಡಲೇ ಅಂಗೀಕರಿಸಿ, ಕೇಂದ್ರಕ್ಕೆ ಕಳುಹಿಸಬೇಕು.
ಸಂವಿಧಾನ ಪರಿಚ್ಛೇದ 341(3) ಪ್ರಕಾರ ರಾಜ್ಯಸರ್ಕಾರವೇ ಈವರೆಗೆ ಅನುಮೋದನೆ ನೀಡಬಹುದಾಗಿದೆ. ಇದಕ್ಕೆ ಕೇಂದ್ರದ ಅನುಮತಿ ತೆಗೆದುಕೊಳ್ಳುವ ಅವಶ್ಯಕತೆ ಇರಲ್ಲ. ರಾಜ್ಯ ಸರ್ಕಾರ ಶೋಷಣೆಗೊಳಗಾಗಿರುವ ಸಮುದಾಯಕ್ಕೆ ಕೂಡಲೇ ನ್ಯಾಯ ಒದಗಿಸಬೇಕಿದೆ ಎಂದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಎಸ್ಸಿ ಹಾಗೂ ಎಸ್ಟಿಯವರಿಗೆ ನೀಡಿದ ಕಾರ್ಯಕ್ರಮಗಳು ನನೆಗುದಿಗೆ ಬಿದ್ದಿವೆ. ಹಿಂದೆ ಕಾಂಗ್ರೆಸ್ ಸರ್ಕಾರ ತಂದಿರುವ ಯೋಜನೆಯನ್ನೇ ಮುಂದುವರೆಸಿದರೆ ಸಾಕು ಎಂದು ಜಿಲ್ಲಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಒತ್ತಾಯಿಸಿದೆ.