ಶಿವಮೊಗ್ಗ: ಕಾಂಗ್ರೆಸ್ ದೇಶದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ಅಂತಹ ಪಕ್ಷದ ಮುಂದಾಳತ್ವದಲ್ಲಿ ಪ್ರಾದೇಶಿಕ ಪಕ್ಷಗಳು ಬಿಜೆಪಿ ವಿರುದ್ಧ ಹೋರಾಟ ಮಾಡಲು ಸಾಧ್ಯವೇ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ದೇಶದಲ್ಲಿ ಏನೂ ಮಾಡುತ್ತಿಲ್ಲ. ಪ್ರಾದೇಶಿಕ ಪಕ್ಷಗಳು ಜೊತೆ ಸೇರಿ ಬಿಜೆಪಿ ವಿರುದ್ಧ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ. ಬಿಜೆಪಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಬೆಳೆದ ಪಕ್ಷ. ಅದನ್ನು ನಾಶ ಮಾಡಲು ಸಾಧ್ಯವಿಲ್ಲ ಎಂದರು.
ಇದನ್ನೂ ಓದಿ: ಡಿ.10ರ ನಂತರ ರಾಜ್ಯ ರಾಜಕೀಯದಲ್ಲಿ ಬಾರಿ ಬದಲಾವಣೆ: ಬಸವನಗೌಡ ಪಾಟೀಲ್ ಹೊಸ ಬಾಂಬ್
ಶಿವಮೊಗ್ಗದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೋವಿಡ್ ಇರುವ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ಈ ವಿಚಾರದ ಕುರಿತು ಗಮನ ಹರಿಸುತ್ತೇನೆ. ನಮ್ಮ ಜಿಲ್ಲೆಯಲ್ಲಿ ಕೊರೋನಾ ಜಾಸ್ತಿ ಆಗದಂತೆ ತಡೆಯಲಾಗುವುದು ಎಂದರು.
ಪ್ರಧಾನಿ ಮೋದಿ ನಡೆ ಹೊಗಳಿದ ಈಶ್ವರಪ್ಪ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕರ ಜೊತೆ ಹೇಗೆ ಇರಬೇಕು ಅನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಹಿರಿಯರಾದ ದೇವೇಗೌಡರನ್ನು ಎಷ್ಟು ಸೌಜನ್ಯದಿಂದ ನಡೆಸಿಕೊಂಡಿದ್ದಾರೆ ಎಂಬುದನ್ನು ನಾವು ಈಚೆಗೆ ನೋಡಿದ್ದೇವೆ. ಆದರೆ, ಸಿದ್ದರಾಮಯ್ಯ ಅವರು ಪ್ರಧಾನಿ ಬಗ್ಗೆ ಏಕವಚನದಲ್ಲಿ ಮಾತನಾಡೋದು ನಿಲ್ಲಿಸಲಿ ಎಂದರು.