ಶಿವಮೊಗ್ಗ : ನಾವು ಮತ್ತೆ ಕಾಂಗ್ರೆಸ್ಗೆ ಹೋಗಲ್ಲ, ನಾವು ಯಾರೂ ಅವರ ಸಂಪರ್ಕದಲ್ಲಿಲ್ಲ ಎಂದು ಸಚಿವ ಕೆ ಸಿ ನಾರಾಯಣಗೌಡ ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದ ಡಿಎಆರ್ ಸಭಾಂಗಣದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ.
ಮಾಜಿ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ. ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯರಿಗೆ ಮಾಡಲು ಕೆಲಸ ಇಲ್ಲ. ಅವರು ಏನೇನೋ ಹೇಳ್ತಾರೆ ಅಷ್ಟೇ.. ನಮಗೆ ಮಾಡೋಕೆ ಬಹಳ ಕೆಲಸ ಇದೆ ಎಂದರು.
ಮುಂದೆಯೂ ನಮ್ಮ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಹೀಗಾಗಿ, ನಾವ್ಯಾರು 17 ಜನರೂ ಕೂಡ ಕಾಂಗ್ರೆಸ್ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.
ಉಸ್ತುವಾರಿ ಸಚಿವರ ಬದಲಾವಣೆಯಿಂದ ನನ್ನ ಮಂಡ್ಯ ರಾಜಕಾರಣಕ್ಕೆ ಹಿನ್ನೆಡೆಯಾಗಲ್ಲ. ಮಂಡ್ಯದಲ್ಲಿ 3 ರಿಂದ 4 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು.
ಇದನ್ನೂ ಓದಿ: ಹುಚ್ಚು ಹಿಡಿದವರು ಮಾತ್ರ ಬಿಜೆಪಿಯಿಂದ ಕಾಂಗ್ರೆಸ್ಗೆ ವಲಸೆ ಹೋಗ್ತಾರೆ: ಸಚಿವ ಆರಗ ಜ್ಞಾನೇಂದ್ರ
ತಮ್ಮ ಮಾತಿನುದ್ದಕ್ಕೂ ಮಾಜಿ ಸಿಎಂ ಬಿಎಸ್‌ವೈ ಅವರನ್ನು ನಾರಾಯಣಗೌಡ ಹಾಡಿ ಹೊಗಳಿದರು. ಯಡಿಯೂರಪ್ಪ ಅವರ ಕಾಲಾವಧಿಯಲ್ಲಿ ಅನೇಕ ಅಭಿವೃದ್ಧಿಗಳಾಗಿವೆ. ಜಿಲ್ಲೆಯಲ್ಲಿ, ರಾಜ್ಯದಲ್ಲಿ ಯಡಿಯೂರಪ್ಪ ಅವರು ಅನೇಕ ಸಾಧನೆ ಮಾಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಹೈಕಮಾಂಡ್ ತೀರ್ಮಾನ. ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಯಾಗಿದ್ದಕ್ಕೆ ಅಭಿವೃದ್ಧಿ ಕುಂಠಿತವಾಗಲ್ಲ. ನಾನು ತಿಂಗಳಿಗೆ ಎರಡ್ಮೂರು ಬಾರಿ ಬಂದು ಹೋಗುತ್ತೇನೆ. ಸ್ಮಾರ್ಟ್ ಸಿಟಿ ಕಾಮಗಾರಿ ಸರಿಯಾಗಿ ಪರಿಶೀಲಿಸಿ ನಂತರ ಮಾತನಾಡುತ್ತೇನೆ ಎಂದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ