ಶಿವಮೊಗ್ಗ: ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಇಂದಿಗೆ 70 ವಸಂತ ಪೂರೈಸಿದೆ. ಹೀಗಾಗಿ ಭೀಮರಥ ಶಾಂತಿ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಅವರ ನಿವಾಸದಲ್ಲಿ ಎರಡು ದಿನಗಳಿಂದ ಪೂಜೆ, ಹೋಮ-ಹವನಗಳನ್ನು ನಡೆಸಲಾಗುತ್ತಿದೆ. ಇಂದು ಸಹಸ್ರ ರುದ್ರಾಪಠಣ, ನಿನ್ನೆ ಸಹಸ್ರ ನಾರಿಕೇಳ ಹೋಮ ನಡೆಯಿತು. ನಾಳೆ ಭೀಮರಥ ಶಾಂತಿ ಹೋಮ ನಡೆಸಲಾಗುತ್ತದೆ.
ಕಾರ್ಯಕ್ರಮಕ್ಕಾಗಿ ಭರ್ಜರಿ ವೇದಿಕೆ ಸಿದ್ದಪಡಿಸಲಾಗಿದೆ. ಸುಮಾರು 10 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ನಾಳಿನ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಭಾಗಿಯಾಗಿ ಈಶ್ವರಪ್ಪ ದಂಪತಿಗೆ ಆಶೀರ್ವಾದ ಮಾಡಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿ ಸಚಿವರು ಭಾಗಿಯಾಗಲಿದ್ದಾರೆ.