ಶಿವಮೊಗ್ಗ: ಆ್ಯಂಬುಲೆನ್ಸ್ಗಳಲ್ಲಿ Anti Venom Serum (ASV) ಶೇಖರಿಸಿಡಲು ಕ್ರಮ ಕೈಗೊಳ್ಳುವಂತೆ ಸಾಗರ ಶಾಸಕ ಹರತಾಳು ಹಾಲಪ್ಪ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಚ್ಚಿದ ಸಂದರ್ಭದಲ್ಲಿ 108 ಆ್ಯಂಬುಲೆನ್ಸ್ಗಳ ಮೂಲಕ ಸರ್ಕಾರಿ ಆಸ್ಪತ್ರೆಗಳಿಗೆ ಸಾಗಿಸುವಾಗ ಆಗುವ ಅನಾಹುತಗಳನ್ನುತಪ್ಪಿಸಲು ಹಾಗೂ ತುರ್ತು ಚಿಕಿತ್ಸೆ ನೀಡಲು ASV ಇಂಜೆಕ್ಷನ್ಗಳು ಸಹಾಯಕವಾಗುತ್ತವೆ. ಹೀಗಾಗಿ ಈ ಇಂಜೆಕ್ಷನ್ಗಳನ್ನು ಆ್ಯಂಬುಲೆನ್ಸ್ಗಳಲ್ಲಿ ಶೇಖರಿಸಿಡಲು ಶಾಸಕರು ಸರ್ಕಾರ ಒತ್ತಾಯಿಸಿದ್ದಾರೆ.
ಇನ್ನು ಸಾಗರ ಉಪವಿಭಾಗೀಯ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ RT-PCR ಪ್ರಯೋಗಾಲಯಕ್ಕೆ ಪೂರಕ ಸಲಕರಣೆ ಒದಗಿಸುವಂತೆ ಹಾಗೂ ಸದರಿ ಆಸ್ಪತ್ರೆಯನ್ನು 100 ಹಾಸಿಗೆಯಿಂದ 150 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.