ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಹಳೇ ಸೊರಬದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದ ಹಿನ್ನಲೆ, ಶಾಸಕ ಕುಮಾರ್ ಬಂಗಾರಪ್ಪ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ಸೊರಬ ಪಟ್ಟಣದಲ್ಲಿ ಸಭೆ ನಡೆಸಿದ ಅವರು, ಹಳೇ ಸೊರಬದಲ್ಲಿ ಪ್ರಕರಣ ಹೇಗೆ ಪತ್ತೆಯಾಯಿತು. ಸೋಂಕಿತ ಮಹಿಳೆಯ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದ್ದಲಿದ್ದವರನ್ನ ಹೇಗೆ ಪತ್ತೆ ಮಾಡುತ್ತೀರಿ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಅಲ್ಲದೆ, ಹಳೇ ಸೊರಬ ಕಂಟೈನ್ಮೆಂಟ್ ಝೋನ್ ಆಗಿ ಪರಿವರ್ತನೆ ಮಾಡಿದ ಬಗ್ಗೆ ಮಾಹಿತಿ ಪಡೆದು, ಮತ್ತೆ ತಾಲೂಕಿನಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.