ETV Bharat / city

ಕಾರ್ಮಿಕರ ಮಕ್ಕಳಿಗೆ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ, 25 ಸಾವಿರ ರೂ. ಧನಸಹಾಯ : ಸಚಿವ ಹೆಬ್ಬಾರ್ - ಶಿವರಾಮ್ ಹೆಬ್ಬಾರ್

ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣೆ, ತರಬೇತಿ ಮತ್ತು ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯನ್ನು ಶಿವಮೊಗ್ಗದಲ್ಲಿ ಉದ್ಘಾಟಿಸಲಾಯಿತು.

mobile Health Clinic inauguration in Shivamogga
ಶಿವರಾಮ್ ಹೆಬ್ಬಾರ್
author img

By

Published : Jun 28, 2022, 6:50 PM IST

Updated : Jun 28, 2022, 8:49 PM IST

ಶಿವಮೊಗ್ಗ: ಸರ್ಕಾರ ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಹೊಸ ಯೋಜನೆಗಳು ಮತ್ತು ಕಾರ್ಯಕ್ರಮದ ಮೂಲಕ ಕಾರ್ಮಿಕರ ಜೀವನದಲ್ಲಿ ವಿಶ್ವಾಸ ತುಂಬುವ ಕೆಲಸವನ್ನು ಕಾರ್ಮಿಕ ಇಲಾಖೆಯ ಮೂಲಕ ಮಾಡುತ್ತಿದೆ. ನಮ್ಮ ಸರ್ಕಾರ ಕಾರ್ಮಿಕರ ಬದುಕನ್ನು ಹಸನು ಮಾಡಲು ಪಣ ತೊಟ್ಟಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಕಲ್ಯಾಣ ಮಂಡಳಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣೆ, ತರಬೇತಿ ಮತ್ತು ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯನ್ನು ಸಚಿವ ಶಿವರಾಮ್ ಹೆಬ್ಬಾರ್ ಉದ್ಘಾಟನೆ ಬಳಿಕ ಮಾತನಾಡಿದರು.

ಕಾರ್ಮಿಕರ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಇಲಾಖೆ ಒಟ್ಟು 750 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಉಚಿತ ತರಬೇತಿ ನೀಡುವ ಯೋಜನೆ, ಎಸ್​ಎಸ್​ಎಲ್​ಸಿಯಲ್ಲಿ 600 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಗೌರವಧನ ಹಾಗೂ 10 ಸಾವಿರ ಬೋನಸ್ ಸೇರಿ ಒಟ್ಟು 25 ಸಾವಿರ ಘೋಷಿಸಿದೆ. 2,591 ಮಕ್ಕಳು 600 ಕ್ಕಿಂತ ಹೆಚ್ಚು ಅಂಕ ಪಡೆದಿರುವುದು ಶ್ಲಾಘನೀಯ ಎಂದರು.‌ ಈ ವರ್ಷದಲ್ಲಿ ಸುಮಾರು 37 ಲಕ್ಷ ರೂ. ವೆಚ್ಚದಲ್ಲಿ 18 ತಿಂಗಳ ಪೈಲಟ್ ತರಬೇತಿಯನ್ನು ಕಾರ್ಮಿಕರ ಮಕ್ಕಳಿಗೆ ನೀಡಲಾಗುವುದು ಎಂದು ತಿಳಿಸಿದರು.

ನಂತರ‌ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಕಾರ್ಮಿಕ ಇಲಾಖೆಯಿಂದ ಇಂದು ವಲಸೆ ಕಾರ್ಮಿಕರ ಸೂರಿಗಾಗಿ ವಸತಿ ಸಮುಚ್ಚಯ, ಉಚಿತ ಆರೋಗ್ಯ ತಪಾಸಣೆ, ಭದ್ರಾವತಿಯಲ್ಲಿ 7 ಕೋಟಿ ರೂ. ವೆಚ್ಚದ ಕಾರ್ಮಿಕರ ಸಮುದಾಯ ಭವನಕ್ಕೆ ಗುದ್ದಲಿ‌ ಪೂಜೆ ನಡೆಯುತ್ತಿರುವುದು‌ ಸಂತಸದ ವಿಚಾರವಾಗಿದೆ. 2-3 ದಿನಗಳಲ್ಲಿ ಸಂಚಾರಿ ಕ್ಲಿನಿಕ್ ಕಾರ್ಮಿಕ ಬಳಿಯೇ ಬರಲಿದೆ ಎಂದರು.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಮಾತನಾಡಿ, ಕಟ್ಟಡ ಕಾರ್ಮಿಕರು ಸಾಮಾನ್ಯವಾಗಿ ವಲಸೆ ಕಾರ್ಮಿಕರಾಗಿರುತ್ತಾರೆ. ಎಲ್ಲರಿಗೂ ಕಟ್ಟಡ ಕಟ್ಟುವ ಕಾರ್ಮಿಕರಿಗೆ ವಸತಿ ಇರಲಿಲ್ಲ. ಆದರೆ, ಇವತ್ತು ನಮ್ಮ ಸರ್ಕಾರ, ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ಗೃಹಗಳನ್ನು ನಿರ್ಮಿಸುತ್ತಿದೆ. 10 ಎಕರೆ ಜಾಗದಲ್ಲಿ 10 ಕೋಟಿ ವೆಚ್ಚದಲ್ಲಿ ವಸತಿಗೃಹವನ್ನು ನಿರ್ಮಿಸಲಾಗುತ್ತಿದೆ. ಕಟ್ಟಡ ನಿರ್ಮಿಸುವ ಕಾರ್ಮಿಕರಿಗೆ ವಸತಿ ಗೃಹವನ್ನು ನಿರ್ಮಿಸುವ ಪುಣ್ಯದ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ, ಕಾರ್ಮಿಕರಿಗೆ ಬಳಕೆಗೆ ಅನುವು ಮಾಡಿಕೊಡಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಕುಮಾರಸ್ವಾಮಿ ಲಾಟರಿ‌ ಮುಖ್ಯಮಂತ್ರಿ, ಸಂಘ ಪರಿವಾರದ ಬಗ್ಗೆ ಮಾತನಾಡಿದ್ರೆ ಭಸ್ಮ ಆಗ್ತೀರ: ರೇಣುಕಾಚಾರ್ಯ

Last Updated : Jun 28, 2022, 8:49 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.