ETV Bharat / city

ಶಿರಾಳಕೊಪ್ಪ: 30 ಬೆಡ್​ನ ಕೋವಿಡ್ ಕೇರ್ ಸೆಂಟರ್​ಗೆ ಸಂಸದ ರಾಘವೇಂದ್ರ ಚಾಲನೆ

ಗ್ರಾಮಾಂತರ ಭಾಗದಲ್ಲಿ ಕೋವಿಡ್ ಹೆಚ್ಚಾಗುತ್ತಿರುವುದರಿಂದ ಗ್ರಾಮಾಂತರ ಭಾಗದಲ್ಲಿಯೇ ಚಿಕಿತ್ಸೆ ಸಿಗುವಂತೆ ಮಾಡಲು ಈ ಪ್ರಯತ್ನ ಮಾಡುತ್ತಿದೆ. ಗ್ರಾಮಾಂತರ ಭಾಗದವರು ನಗರ ಪ್ರದೇಶಕ್ಕೆ ಅಲೆದಾಡುವುದು ತಪ್ಪುತ್ತದೆ ಎಂಬ ದೃಷ್ಟಿಯಿಂದ ಕೋವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

mp-raghavendra-
ಸಂಸದ ರಾಘವೇಂದ್ರ ಚಾಲನೆ
author img

By

Published : May 19, 2021, 10:50 PM IST

ಶಿವಮೊಗ್ಗ: ಶಿರಾಳಕೊಪ್ಪದ ಸಮುದಾಯ ಆರೋಗ್ಯ ಕೇಂದ್ರವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬದಲಾವಣೆ ಮಾಡಲಾಗಿದ್ದು, ಇದರ ಉದ್ಟಾಟನೆಯನ್ನು ಸಂಸದ ಬಿ.ವೈ.ರಾಘವೇಂದ್ರ ನೆರವೇರಿಸಿದ್ದಾರೆ.

ಸಂಸದ ರಾಘವೇಂದ್ರ ಚಾಲನೆ

ಓದಿ: ಚಾಕುವಿನಿಂದ ಬೆದರಿಸಿ, ಒಡಹುಟ್ಟಿದ ಸಹೋದರಿಯರ ಮೇಲೆ ಅತ್ಯಾಚಾರ

ಕೋವಿಡ್ ಪ್ರಕರಣ ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಮೆಗ್ಗಾನ್ ಆಸ್ಪತ್ರೆಯ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇದನ್ನು ಕಡಿಮೆ ಮಾಡುವ ದೃಷ್ಟಿಯಿಂದ ತಾಲೂಕು ಹಾಗೂ ಹೋಬಳಿ ಮಟ್ಟದ ಆರೋಗ್ಯ ಕೇಂದ್ರವನ್ನಾಗಿ ಮಾರ್ಪಡು ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಸಮುದಾಯ ಆರೋಗ್ಯ ಕೇಂದ್ರವು 30 ಹಾಸಿಗೆಗಳುಳ್ಳ ಆಸ್ಪತ್ರೆಯಾಗಿದೆ. ಇದನ್ನು‌ ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ.

ಗ್ರಾಮಾಂತರ ಭಾಗದಲ್ಲಿ ಕೋವಿಡ್ ಹೆಚ್ವಾಗುತ್ತಿರುವುದರಿಂದ ಗ್ರಾಮಾಂತರ ಭಾಗದಲ್ಲಿಯೇ ಚಿಕಿತ್ಸೆ ಸಿಗುವಂತೆ ಮಾಡಲು ಈ ಪ್ರಯತ್ನ ಮಾಡುತ್ತಿದೆ. ಗ್ರಾಮಾಂತರ ಭಾಗದವರು ನಗರ ಪ್ರದೇಶಕ್ಕೆ ಅಲೆದಾಡುವುದು ತಪ್ಪುತ್ತದೆ ಎಂಬ ದೃಷ್ಟಿಯಿಂದ ಕೋವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಈ ವೇಳೆ MADB ಅಧ್ಯಕ್ಷರಾದ ಶ್ರೀ ಗುರುಮೂರ್ತಿಯವರು, ತಹಶೀಲ್ದಾರ್ ಕವಿರಾಜ್, ತಾಲೂಕು ಆರೋಗ್ಯಾಧಿಕಾರಿಗಳು ಹಾಜರಿದ್ದರು.

ಕೋವಿಡ್ ಹಾಗೂ ತೌಕ್ತೆ ಚಂಡಮಾರುತದ ಮಾಹಿತಿ ನೀಡಿದ ಸಂಸದರು:

ಸಂಸದ ಬಿ.ಬೈ.ರಾಘವೇಂದ್ರ ರವರು ವಿಡಿಯೋ ಕಾನ್ಫರೆನ್ಸ್ ಮೂಲಕ‌ ಸಂವಾದ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಹಾವಳಿ, ಸಾವು, ಚಿಕಿತ್ಸೆಯ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಶ್ರೀ ಅರುಣ್ ಸಿಂಗ್ ಜೀ ರವರಿಗೆ ವಿವರಿಸಿದರು. ತೌಕ್ತೆ ಚಂಡ ಮಾರುತದಿಂದ ಬೈಂದೂರು ಕರಾವಳಿ ಭಾಗದಲ್ಲಿ ಉಂಟಾದ ಹಾನಿಯ ಬಗ್ಗೆ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.