ಶಿವಮೊಗ್ಗ: ಸೇವಾ ಭದ್ರತೆ, ವೇತನ ಹೆಚ್ಚಳ ಹಾಗೂ ಸರ್ಕಾರದ ವಿವಿಧ ನಿಗಮ ಮಂಡಳಿಗಳಲ್ಲಿ ಎಂಪಿಎಂ ಬ್ಯಾಕ್ ಲಾಗ್ ಉದ್ಯೋಗಿಗಳಿಗೆ ವಿಲೀನಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎಂಪಿಎಂ ಬ್ಯಾಕ್ ಲಾಗ್ ಉದ್ಯೋಗಿಗಳ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕಳೆದ ಮೂರು ತಿಂಗಳಿಂದ ವೇತನ ಇಲ್ಲದೇ ಜೀವನ ನಡೆಸುವುದು ಕಷ್ಟಕರವಾಗಿದೆ, ನಮ್ಮ ಕುಟುಂಬಗಳು ಬೀದಿಗೆ ಬಂದಿವೆ. ಆದರೂ, ಸರ್ಕಾರ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಕಳೆದ 12 ವರ್ಷಗಳಿಂದ ಕೆಲಸ ಮಾಡುತ್ತಿದ್ದೇವೆ, ಕೇವಲ 11 ಸಾವಿರ ಸಂಬಳ ನೀಡಲಾಗುತ್ತಿದೆ.
ಹಾಗಾಗಿ, ನಮಗೆ ಸಂಬಳ ಹೆಚ್ಚಳ ಮಾಡಬೇಕು, ಸೇವಾ ಭದ್ರತೆ ನೀಡಬೇಕು, ಎಂಪಿಎಂ ಬ್ಯಾಕ್ ಲಾಗ್ ನೌಕರರನ್ನು ವಿವಿಧ ನಿಗಮ ಮಂಡಳಿಗಳಲ್ಲಿ ವಿಲೀನಗೋಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.