ಶಿವಮೊಗ್ಗ: ಎನ್ಎಸ್ಯುಐ ಕಾರ್ಯಕರ್ತರು ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಕೈಗೊಂಡರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಕಾರಣರಾದ ಸಚಿವ ಈಶ್ವರಪ್ಪರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಹಾಗೂ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಎನ್ಎಸ್ಯುಐ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ.
ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಕೈಬಿಡುವವರೆಗೂ ಹಾಗೂ ಬಂಧಿಸುವವರೆಗೂ ಧರಣಿ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರ ಮಾತಾಗಿದೆ. ಈ ಸಂದರ್ಭದಲ್ಲಿ ಎನ್ಎಸ್ಯುಐ ರಾಜ್ಯ ಮುಖಂಡ ಚೇತನ್, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ರಮೇಶ್, ಮಧುಸೂದನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.