ಶಿವಮೊಗ್ಗ: ತರತಿಗಳನ್ನು ನಡೆಸದೇ ಏಕಾಏಕಿ ಪರೀಕ್ಷೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಇಲ್ಲಿನ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ನಗರದ ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಇಂದು ನಡೆದ ಪರೀಕ್ಷೆಗೆ ಹಾಜರಾಗದೇ ಹೊರಗುಳಿದು ಪ್ರತಿಭಟನೆ ನಡೆಸಿದರು. ಅಲ್ಲದೇ, ಸರಿಯಾದ ರೀತಿಯಲ್ಲಿ ಕ್ಲಾಸ್ಗಳನ್ನು ಮಾಡದೇ ತರಾತುರಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಇದು ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಪರೀಕ್ಷೆಯನ್ನು ಮುಂದೂಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಮುಂದುವರಿದು ಶಿಕ್ಷಕರು ಮತ್ತು ಪ್ರಾಂಶುಪಾಲರ ವಿರುದ್ಧ ಹರಿಹಾಯ್ದ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶಾತಿ ಪತ್ರವನ್ನು ಹರಿದು ಹಾಕಿ ಆಕ್ರೋಶ ವ್ಯಕ್ಯಪಡಿಸಿದ್ದಾರೆ.
ಇದನ್ನೂ ಓದಿ: ಪ್ರೀತಿ, ಮದುವೆ ಮತ್ತು ವಯಸ್ಸು.. ವಿಧಾನಸಭೆಯಲ್ಲಿ ಹಾಸ್ಯ ಪ್ರಸಂಗ
ಕೊರೊನಾದಿಂದಾಗಿ ಸರಿಯಾಗಿ ತರಗತಿಗಳನ್ನು ನಡೆಸಿಲ್ಲ. ಆನ್ಲೈನ್ನಲ್ಲಿಯೂ ಪಾಠಗಳು ಸರಿಯಾಗಿ ಮಾಡಿಲ್ಲ. ಇದರಿಂದ ನಾವು ಪರೀಕ್ಷೆಗೆ ತಯಾರಿ ಮಾಡಿಲ್ಲ. ದಿಢೀರ್ ಆಗಿ ಪರೀಕ್ಷೆ ನಡೆಸಿದರೆ ಹೇಗೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.