ಶಿವಮೊಗ್ಗ: ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಜಿಲ್ಲಾ ಎನ್ಎಸ್ಯುಐ ವತಿಯಿಂದ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ತ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹಥ್ರಾಸ್ಗೆ ತೆರಳುತ್ತಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಖಂಡನೀಯ.
ದಲಿತ ಯುವತಿಯ ಅತ್ಯಚಾರವನ್ನು ಉತ್ತರಪ್ರದೇಶ ಪೊಲೀಸರು ಒಪ್ಪಿಕೊಳ್ಳುತ್ತಿಲ್ಲ. ಪೊಲೀಸರೇ ಯುವತಿಯ ಶವ ಸಂಸ್ಕಾರ ನಡೆಸುವ ಮೂಲಕ ಕುಟುಂಬಸ್ಥರಿಗೆ ಅನ್ಯಾಯ ಮಾಡಿದ್ದಾರೆ. ಮೋದಿಯವರು ಬೇಟಿ ಬಚಾವೋ ಬೇಟಿ ಪಡಾವೋ ಎಂದು ಹೇಳಿದ್ದರು. ಆದರೆ, ಈಗ ಅದು ನಡೆಯುತ್ತಿಲ್ಲ ಎಂದು ಪ್ರಧಾನಿ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.