ETV Bharat / city

ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಲು ಆಗ್ರಹ: NSUIನಿಂದ ಸಚಿವ ಅಶ್ವತ್ಥ​ ನಾರಾಯಣ್​​ಗೆ ಘೇರಾವ್ - Minister Ashwath narayan

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮಕ್ಕೆ ಹೋಗುವ ವೇಳೆಯಲ್ಲಿ ಸಚಿವ ಅಶ್ವತ್ಥ​ ನಾರಾಯಣ್​​ಗೆ ಎನ್​​ಎಸ್​​ಯುಐ ಕಾರ್ಯಕರ್ತರು ಗೇರಾವ್ ಹಾಕಲು ಯತ್ನಿಸಿ, ಕಪ್ಪು ಬಾವುಟ ಪ್ರದರ್ಶನ ಮಾಡಿದರು.

NSUI workers display black flag to Minister Ashwath narayan
ಎನ್​​ಎಸ್​​ಯುಐ ಕಾರ್ಯಕರ್ತರಿಂದ ಸಚಿವ ಅಶ್ವತ್ಥ್​ ನಾರಾಯಣ್​​ಗೆ ಗೇರಾವ್
author img

By

Published : Oct 6, 2021, 7:12 PM IST

ಶಿವಮೊಗ್ಗ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಲು ಆಗ್ರಹಿಸಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ​ ನಾರಾಯಣ್​ ಅವರಿಗೆ ಜಿಲ್ಲಾ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ, ಹಾಗೂ ಘೇರಾವ್ ಹಾಕಲು ಯತ್ನಿಸಿದ ಘಟನೆ ನಗರದ ಸಹ್ಯಾದ್ರಿ ಕಾಲೇಜು ಬಳಿ ನಡೆದಿದೆ.

ಎನ್​​ಎಸ್​​ಯುಐ ಕಾರ್ಯಕರ್ತರಿಂದ ಸಚಿವ ಅಶ್ವತ್ಥ್​ ನಾರಾಯಣ್​​ಗೆ ಘೇರಾವ್

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ ಸಂವಾದ ಕಾರ್ಯಕ್ರಮಕ್ಕೆ ಹೋಗುವ ವೇಳೆಯಲ್ಲಿ ಸಚಿವರಿಗೆ ಮಳೆ ಲೆಕ್ಕಿಸದೇ ಕಾರ್ಯಕರ್ತರು ಗೇರಾವ್ ಹಾಕಲು ಯತ್ನಿಸಿ, ಕಪ್ಪು ಬಾವುಟ ಪ್ರದರ್ಶನ ಮಾಡಿದರು. ಈ ವೇಳೆ, ಪೊಲೀಸರು ಕಾರ್ಯಕರ್ತರನ್ನು ತಡೆದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ಚರ್ಚೆಯಿಲ್ಲದೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಅನುಸರಿಸುವ ಮಾರ್ಗಗಳು ಸರಿಯಲ್ಲ. ಇನ್ನು ಈ ಶಿಕ್ಷಣ ನೀತಿಯಲ್ಲಿ ಕಡ್ಡಾಯ ಮತ್ತು ಸಮಾನ ಶಿಕ್ಷಣದ ಬಗ್ಗೆ ಯಾವುದೇ ರೀತಿಯಲ್ಲಿ ಹೇಳಲಾಗಿಲ್ಲ.

ಈ ಶಿಕ್ಷಣ ನೀತಿ ಜಾರಿಗೊಳಿಸಿರುವುದರಿಂದ ಶಿಕ್ಷಣ ತೊರೆಯುವವರ ಸಂಖ್ಯೆ ಹೆಚ್ಚಾಗುತ್ತದೆ. ಹಾಗೂ ಶಿಕ್ಷಣ ವ್ಯಾಪಾರೀಕರಣ, ಖಾಸಗೀಕರಣಕ್ಕೆ ಹೆಚ್ಚು ಆದ್ಯತೆ ನೀಡುವಂತಾಗುತ್ತದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ ಎಂದು ಆರೋಪಿಸಿ ಕಪ್ಪು ಬಾವುಟ ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಎನ್​​ಎಸ್​​ಯುಐನ ರಾಜ್ಯ ಕಾರ್ಯದರ್ಶಿ ಬಾಲಾಜಿ, ನಗರ ಅಧ್ಯಕ್ಷ ವಿಜಯ್, ಜಿಲ್ಲಾ ಕಾರ್ಯಾಧ್ಯಕ್ಷ ರವಿ , ಅಲ್ಪ ಸಂಖ್ಯಾತ ಕಾಂಗ್ರೆಸ್​​ನ ನಗರ ಅಧ್ಯಕ್ಷ ಮಹಮ್ಮದ್ ನಿಹಾಲ್, ಯುವ ಕಾಂಗ್ರೆಸ್​​ನ ರಾಜ್ಯ ಕಾರ್ಯದರ್ಶಿ ಚೇತನ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.